ಬಿಜೆಪಿಯವರ ಧರ್ಮಾಂಧತೆಗೆ‌ ಬಡವರ ಮಕ್ಕಳು ಬೀದಿ ಹೆಣವಾಗುತ್ತಿದ್ದಾರೆ: ಸಚಿವ ದಿನೇಶ್‌ ಗುಂಡೂರಾವ್‌ ಕಿಡಿ

Date:

Advertisements

ಸುಹಾಸ್‌ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದವರು ಪುಣ್ಯಾತ್ಮ ಬಸವರಾಜ ಬೊಮ್ಮಾಯಿ. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನೆ ಮಾಡಿದ್ದಾರೆ

ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿಯನ್ನು‌ ಎಕ್ಸ್ ತಾಣದಲ್ಲಿ ಹಂಚಿಕೊಂಡಿರುವ ಸಚಿವರು, “ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು‌ ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ ಬಿಜೆಪಿ ನಾಯಕರ ಗಮನಕ್ಕೆ ಇದು”ಎಂದಿದ್ದಾರೆ.

“ಕರಾವಳಿಯನ್ನು ಕೋಮು‌ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು‌ ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು‌ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ” ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಹಾಸ್ ಶೆಟ್ಟಿ ಸಾವಿನಲ್ಲಿ ಬಿಜೆಪಿ ಕೆಟ್ಟ ರಾಜಕೀಯ

“ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ಬಿಜೆಪಿ ನಾಯಕರ‌ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ‌ ಕಾಳಗ ಮಾಡುತ್ತಿದ್ದಾರೆಯೆ? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ? ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

“ಬಿಜೆಪಿಯವರ ‌ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ‌ ಬಲಿಯಾಗಿದೆ. ಎಷ್ಟೋ ಮನೆಗಳ‌‌ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ‌ದುಷ್ಟ ರಾಜಕಾರಣ ಮಾಡುತ್ತಿದ್ದಾರೆ” ಎಂದು ಹರಿಹಾಯ್ದಿದ್ದಾರೆ.

“ದಕ್ಷಿಣ ಕನ್ನಡದ‌ ಜನ‌ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ‌ ಬಿಜೆಪಿಯವರ‌ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ‌ ನೆಮ್ಮದಿಯೇ ಹಾಳಾಗಲಿದೆ” ಎಂದು ಆಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X