ಕಾವೇರಿ ನಮ್ಮ ಜೀವನದ ಪ್ರಶ್ನೆ ಆದಕಾರಣ ಮೇಕೆದಾಟು ಬಳಿ ಜಲಾಶಯ ನಿರ್ಮಾಣಕ್ಕೆ ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ. ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಅವರನ್ನು ಭೇಟಿ ಮಾಡಿದ ನಂತರ ಚೆನ್ನೈನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ರಾಜ್ಯದ ಕಾವೇರಿ ನದಿ ಮುಖಜ ಭೂಮಿಯ ಜಿಲ್ಲೆಗಳಲ್ಲಿನ ಬೆಳೆಗಳನ್ನು ರಕ್ಷಿಸಲು ಕರ್ನಾಟಕವು ತಕ್ಷಣ ನದಿಯಿಂದ ನೀರು ಬಿಡಬೇಕು. ಈ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕದೊಂದಿಗೆ ಮಾತುಕತೆ ನಡೆಸಬೇಕು ಅಥವಾ ನೀರು ಬಿಡುಗಡೆ ಮಾಡಲು ಆದೇಶಿಸಬೇಕು ಎಂಬುದಾಗಿ ಶೇಖಾವತ್ ಅವರಿಗೆ ಮನವಿ ಸಲ್ಲಿಸಲಾಯಿತು ಎಂದು ದುರೈ ಹೇಳಿದರು.
ಈ ಸುದ್ದಿ ಓದಿದ್ದೀರಾ? ಥ್ರೆಡ್ಸ್: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಕೋಟಿ ಮಂದಿ ಇನ್‌ಸ್ಟಾಲ್; ಆ್ಯಪ್‌ನಲ್ಲಿರುವ ವಿಶೇಷತೆಗಳೇನು?
ಜುಲೈ 3ರವರೆಗೆ ನಮ್ಮ ರಾಜ್ಯವು ಕಾವೇರಿ ನದಿಯಿಂದ ಕಡಿಮೆ ಪ್ರಮಾಣದ ನೀರನ್ನು ಪಡೆಯುತ್ತಿರುವುದರ ಬಗ್ಗೆ ಕೇಂದ್ರದ ಗಮನ ಸೆಳೆಯಲಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ನದಿ ನೀರನ್ನೇ ನಂಬಿಕೊಂಡಿರುವ ಜಿಲ್ಲೆಗಳಲ್ಲಿ ಅಲ್ಪಾವಧಿ ಬೆಳೆಗಳ ಮೇಲೆ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಪ್ರಾಧಿಕಾರದ ಸಭೆ ಕರೆಯಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ದುರೈ ಹೇಳಿದ್ದಾರೆ.
ನೀರಿನ ಹಂಚಿಕೆ ಕುರಿತಂತೆ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಪಾಲಿಸಬೇಕಾದ ಹೊಣೆ ಕರ್ನಾಟಕ ಸರ್ಕಾರದ ಮೇಲಿದೆ. ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಜಲಾಶಯ ಯೋಜನೆ ಬಗ್ಗೆ ಪ್ರತಿಕ್ರಿಸಿಯಿಸಿರುವ ಅವರು, ಕರ್ನಾಟಕ ನಮ್ಮ ಜೊತೆ ಸಭೆ ನಡೆಸಿದರೂ, ಪತ್ರ ಬರೆದರೂ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದರು.