ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಾಲ್ಕು ತಿಂಗಳೊಳಗೆ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
“ಸ್ಥಳೀಯ ಸಂಸ್ಥೆಗಳಿಗೆ ಸಮಯಕ್ಕೆ ಸರಿಯಾಗಿ ಚುನಾವಣೆಗಳನ್ನು ನಡೆಸಿ, ತಳಮಟ್ಟದ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಆದೇಶವನ್ನು ಗೌರವಿಸಬೇಕು, ಖಾತ್ರಿಪಡಿಸಿಕೊಳ್ಳಬೇಕು” ಎಂದು ಪೀಠವು ಹೇಳಿದೆ.
ಒಬಿಸಿ ಮೀಸಲಾತಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಪ್ರತಿಭಟನೆ, ಹೋರಾಟಗಳು ನಡೆಯುತ್ತಿವೆ. ಪರಿಣಾಮ, ಮೀಸಲಾತಿ ಹಂಚಿಕೆಯಲ್ಲಿ ವಿವಾದ ಸೃಷ್ಟಿಯಾಗಿದೆ. ಪರಿಣಾಮವಾಗಿ, ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಹಲವು ವರ್ಷಗಳಿಂದ ನಡೆದಿಲ್ಲ. ಸ್ಥಳೀಯ ಸಂಸ್ಥೆಗಳು ಜನಪ್ರತಿನಿಧಿಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ.