ಬೀದರ್‌ | ಬೇಸಿಗೆ ದಾಹ ತಣಿಸಿ ಮಾನವೀಯತೆ ಮೆರೆಯುತ್ತಿರುವ ʼಸತ್ಯಸಾಯಿ ಸಂಸ್ಥೆ ಸೇವಕರುʼ

Date:

Advertisements

ಬಿರು ಬೇಸಿಗೆಯ ಈ ದಿನಗಳಲ್ಲಿ ಜನ, ಜಾನುವಾರು, ಪ್ರಾಣಿ–ಪಕ್ಷಿಗಳು ಕುಡಿಯುವ ನೀರು, ನೆರಳಿಗಾಗಿ ದಿನವಿಡೀ ಪರಿತಪಿಸುವುದು ಬಿಸಿಲನಾಡು ಬೀದರ್ ಜಿಲ್ಲೆಯಲ್ಲಿ ನಿತ್ಯ ಕಂಡುಬರುವ ಸಾಮಾನ್ಯ ದೃಶ್ಯವಾಗಿದೆ.

ಜಿಲ್ಲೆಯಲ್ಲಿ 40 ಡಿಗ್ರಿ ಸೆಲ್ಸಿಯಸ್‌ನಷ್ಟು ಪ್ರಖರವಾದ ಬಿಸಿಲಿಗೆ ಜನರು ತಿರುಗಾಡಲು ಅಕ್ಷರಶಃ ಪರದಾಡುತ್ತಿದ್ದಾರೆ. ಈ ರಣಬಿಸಿಲಿನಲ್ಲಿ ದಣಿದ ಪ್ರಾಣಿ, ಪಕ್ಷಿಗಳಿಗೆ ನೀರು, ಕಾಳು, ಆಹಾರದ ವ್ಯವಸ್ಥೆಯನ್ನು ಅನೇಕರು ಒದಗಿಸಿ ಮಾನವೀಯತೆ ಮೆರೆಯುತ್ತಿದ್ದಾರೆ.

ಬೀದರ್‌ ನಗರಸಭೆ ಎದುರಗಡೆಯ ಬಸ್‌ ನಿಲ್ದಾಣದ ಆವರಣದಲ್ಲಿ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ಸೇವಕರು ಕಳೆದ ಒಂದು ತಿಂಗಳಿಂದ ಉಚಿತ ನೀರಿನ ವ್ಯವಸ್ಥೆ ಮಾಡಿರುವುದು ಮಾನವೀಯತೆಗೆ ಸಾಕ್ಷಿಯಾಗಿದೆ.

Advertisements

ಬಿಸಿಲ ಧಗೆಯಿಂದ ಬಾಯಾರಿ ಬಂದ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ, ವಾಹನ ಚಾಲಕರಿಗೆ ʼಬಿಸುಲ್‌ ಭಾಳ್‌ ಅದಾ, ಬರೀ ತಣ್ಣಂದ್‌ ನೀರ್‌ ಕುಡೀರಿʼ ಎಂದು ಲೋಟದಲ್ಲಿ ಶುದ್ಧ ತಂಪಾದ ನೀರು ಕೈಗಿಡುವ ಸೇವಕರ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ʼಕಳೆದ ಒಂದು ತಿಂಗಳಿಂದ ನಮ್ಮ ಸಂಸ್ಥೆಯಿಂದ ನೀರಿನ ಕ್ಯಾನ್‌ ಇಡಲಾಗಿದೆ. ಸಂಸ್ಥೆಯ ಇಬ್ಬರು ಸೇವಕರು ದಿನಪೂರ್ತಿ ಇಲ್ಲೇ ಕುಳಿತು ನಿರ್ವಹಣೆ ಮಾಡುತ್ತಿದ್ದೇವೆ. ಪ್ರತಿ ನಿತ್ಯ 30 ಕ್ಯಾನ್‌ ಶುದ್ಧ ಕುಡಿಯುವ ನೀರು ಖರೀದಿಸಿ ಬೆಳಿಗ್ಗೆ 11 ಗಂಟೆಯಿಂದ ಸಂಜೆಯವರೆಗೆ ಪೂರೈಸಲಾಗುತ್ತಿದೆʼ ಎಂದು ನಿವೃತ್ತ ಶಿಕ್ಷಕರು ಆದ ಸಂಸ್ಥೆಯ ಸೇವಕರಾದ ಶಿವರಾಜ ಮದರಗಿ ಹೇಳುತ್ತಾರೆ.

WhatsApp Image 2025 05 06 at 3.51.52 PM
ಸತ್ಯಸಾಯಿ ಸೇವಾ ಸಂಸ್ಥೆಯಿಂದ ಸ್ಥಾಪಿಸಲಾದ ನೀರಿನ ಕ್ಯಾನ್‌ಗಳಿಂದ ಸಾರ್ವಜನಿಕರು ತಂಪಾದ ನೀರು ಸೇವಿಸಿದರು.

ʼಬೇಸಿಗೆಯಲ್ಲಿ ಬಾಯಾರಿ ಬಂದ ಜನರಿಗೆ ನೀರು ಕೊಡುವುದು ಮಾನವೀಯ ಕೆಲಸ. ಸೇವಾ ಮನೋಭಾವನೆ ದೃಷ್ಟಿಯಿಂದ ನಮ್ಮ ಸಂಸ್ಥೆಯಿಂದ ಒಂದು ಕಡೆ ತಂಪು ನೀರಿನ ವ್ಯವಸ್ಥೆ ಮಾಡಲಾಗಿದೆ. ಹಳ್ಳಿಗಳಿಂದ ಬಂದ ಜನರು, ವಿದ್ಯಾರ್ಥಿಗಳು, ವೃದ್ಧರಿಗೆ ಆಸರೆಯಾಗಿದೆ. ಮುಂದಿನ ವರ್ಷ ಇದು ವಿಸ್ತರಿಸಲಾಗುವುದುʼ ಎಂದು ಸೇವಕರಾದ ವಿಮಲಬಾಯಿ ಫುಲೇಕರ್‌, ಸ್ವಪ್ನಾ ಪುರಾಣಿಕ ಹೇಳಿದರು.

ಹೊರಗಡೆ ಅಂಗಡಿಗಳಲ್ಲಿ ಒಂದು ಲೀಟರ್‌ ನೀರಿನ ಬಾಟಲಿಗೆ 20 ರೂ. ದರ ಇದೆ. ಸತ್ಯಸಾಯಿ ಸಂಸ್ಥೆಯಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದು ಮಾನವೀಯ ಕಾರ್ಯ. ಗ್ರಾಮೀಣ ಭಾಗದಿಂದ ಬಂದ ಅನೇಕರು ಇಲ್ಲೇ ಬಂದು ತಂಪಾದ ನೀರು ಬಾಟಲಿ ತುಂಬಿಕೊಂಡು ಹೋಗುತ್ತಿದ್ದಾರೆ. ಇದರಿಂದ ಕುಡಿಯುವ ನೀರು ಖರೀದಿಸುವುದು ತಪ್ಪಿದೆ. ಜಿಲ್ಲಾಡಳಿತ ಮಾಡಬೇಕಾದ ಕಾರ್ಯ ಸಂಸ್ಥೆಯವರು ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ವಿದ್ಯಾರ್ಥಿಯೊಬ್ಬರು ಪ್ರತಿಕ್ರಿಯಿಸಿದರು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X