ಅಮೆಜಾನ್ ಪ್ರೈಮ್ ಓಟಿಟಿಯಲ್ಲಿ ‘ಅಮೃತಮತಿ’

Date:

Advertisements

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರವು ಈಗ ಅಮೆಜಾನ್ ಪ್ರೈಮ್‍ನ ಓಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದೆ. ಈಗ ಆಸಕ್ತರು ಅಮೆಜಾನ್ ಪ್ರೈಮ್‍ನಲ್ಲಿ ಈ ಚಿತ್ರವನ್ನು ನೋಡಬಹುದಾಗಿದೆ.

‘ಅಮೃತಮತಿ’ ಚಿತ್ರವು ಹದಿಮೂರನೇ ಶತಮಾನದ ಖ್ಯಾತ ಕನ್ನಡ ಕವಿ ಜನ್ನನ ‘ಯಶೋಧರ ಚರಿತೆ’ ಕಾವ್ಯ ಪ್ರಸಂಗವನ್ನು ಆಧರಿಸಿ ರೂಪುಗೊಂಡಿದೆ. ಈ ಚಿತ್ರದಲ್ಲಿ ಮೂಲ ಕಥನವನ್ನು ಮರುಸೃಷ್ಟಿ ಮಾಡಿ ನಿರೂಪಿಸಿರುವುದು ಒಂದು ವಿಶೇಷ. ಕನ್ನಡ ಸಾಹಿತ್ಯದಲ್ಲಿ ಮರುಸೃಷ್ಟಿಯ ಪರಂಪರೆಯಿದ್ದು ಈ ಚಿತ್ರವು ಅದರ ಮುಂದುವರಿಕೆಯಾಗಿದೆ.

ಇದನ್ನು ಓದಿದ್ದೀರಾ?: ಕ್ಷಮಿಸಿ ಕರ್ನಾಟಕ; ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ಸೋನು ನಿಗಮ್

Advertisements

ಬರಗೂರು ರಾಮಚಂದ್ರಪ್ಪನವರು ನಿರ್ದೇಶನದ ಜೊತೆಗೆ ಚಿತ್ರಕತೆ, ಸಂಭಾಷಣೆ ಮತ್ತು ಗೀತರಚನೆ ಮಾಡಿದ್ದಾರೆ ಪ್ರಸಿದ್ಧ ಕಲಾವಿದೆ ಹರಿಪ್ರಿಯ ಅವರು ಅಮೃತ ಮತಿಯ ಪಾತ್ರದಲ್ಲಿ ಮತ್ತು ಬಹುಭಾಷಾ ಕಲಾವಿದ ಕಿಶೋರ್ ಅವರು ಯಶೋಧರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟ ಸುಂದರರಾಜ್, ಪ್ರಮೀಳಾ ಜೋಷಾಯ್, ತಿಲಕ್, ಅಂಬರೀಶ್ ಸಾರಂಗಿ, ವತ್ಸಲಾ ಮೋಹನ್, ಸುಪ್ರಿಯಾ ರಾವ್ ಮುಂತಾದವರು ತಾರಾಗಣದಲ್ಲಿದ್ದಾರೆ.

ಸುರೇಶ್ ಅರಸು ಅವರು ಸಂಕಲನ, ನಾಗರಾಜ್ ಆದವಾನಿಯವರು ಛಾಯಾಗ್ರಹಣ, ಶಮಿತಾ ಮಲ್ನಾಡ್ ಅವರು ಸಂಗೀತ ನಿರ್ದೇಶನ, ತ್ರಿಭುವನ್ ಅವರು ನೃತ್ಯ ಸಂಯೋಜನೆಯನ್ನು ನಿರ್ವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X