ರಾಜ್ಯಪಾಲರು ರಾಜಕಾರಣದ ಬಗ್ಗೆ ಮಾತನಾಡಬಾರದು ಎಂದ ಅಣ್ಣಾಮಲೈ

Date:

Advertisements

ತಮಿಳುನಾಡು ರಾಜ್ಯಪಾಲ ಆರ್‌ ಎನ್ ರವಿ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ನಡುವಿನ ಸಂಘರ್ಷ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ರಾಜ್ಯಪಾಲರು ರಾಜಕೀಯ ಮಾತನಾಡಬಾರದು. ಅವರು ಸಾಂವಿಧಾನಿಕ ಕರ್ತವ್ಯಗಳನ್ನು ನಿರ್ವಹಿಸಲು ಜವಾಬ್ದಾರರಾಗಿರಬೇಕು ಎಂದು ಹೇಳಿದ್ದಾರೆ.

ಚೆನ್ನೈನ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಸಚಿವ ಸೆಂಥಿಲ್ ಅವರನ್ನು ರಾಜ್ಯಪಾಲರು ವಜಾಗೊಳಿಸಿರುವ ಕ್ರಮ ಸರಿಯಲ್ಲ. ಇದು ಒಂದು ಪಕ್ಷಕ್ಕೆ ಲಾಭದಾಯಕವಾಗಿದ್ದರೂ ರಾಜಕೀಯವಾಗುತ್ತದೆ. ರಾಜ್ಯಪಾಲರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿ ಸಲಹೆ ನೀಡಬಹುದು. ಆದರೆ ವಜಾಗೊಳಿಸುವ ನಿರ್ಧಾರ ಸರಿಯಿಲ್ಲ. ರಾಜ್ಯಪಾಲರು ರಾಜಕೀಯ ಮಾತನಾಡುತ್ತಿದ್ದಾರೆ ಎಂದರೆ ಅದು ಡಿಎಂಕೆಯನ್ನು ಗುರಿಯಾಗಿಸುತ್ತದೆ. ಆದರೆ ಬಿಜೆಪಿಗೆ ಲಾಭವಾಗುತ್ತದೆ ಎಂಬುದು ನಮ್ಮ ನಿಲುವಲ್ಲ” ಎಂದು ತಿಳಿಸಿದರು.  

“ರಾಜ್ಯಪಾಲರು ರಾಜಕೀಯ ಮಾತನಾಡಬಾರದು. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ನಾನು ರಾಜ್ಯಪಾಲರು ರಾಜಕೀಯ ಮಾತನಾಡುತ್ತಿರುವುದು ತಪ್ಪು ನಿದರ್ಶನ ಎಂದು ಪ್ರತಿಪಾದಿಸುತ್ತೇನೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ: ತಮಿಳುನಾಡು ಸಚಿವ

“ರಾಜ್ಯಪಾಲರು ನಿಜವಾಗಿಯೂ ಸರ್ಕಾರವನ್ನು ಟೀಕಿಸಲು ಬಯಸಿದರೆ, ಅವರು ರಾಜ್ಯಪಾಲರ ಭಾಷಣದ ಸಮಯದಲ್ಲಿ ರಾಜ್ಯ ವಿಧಾನಸಭೆಯಲ್ಲಿ ಆ ರೀತಿ ಮಾಡಬಹುದು. ರಾಜ್ಯಪಾಲರು ವಿರೋಧ ಪಕ್ಷಗಳಂತೆ ರಾಜ್ಯ ಸರ್ಕಾರವನ್ನು ಟೀಕಿಸಲು ಸಾಧ್ಯವಿಲ್ಲ. ರಾಜ್ಯಪಾಲರು ರಾಜ್ಯ ಸರ್ಕಾರವನ್ನು ಟೀಕಿಸಲು ಪ್ರಾರಂಭಿಸಿದರೆ, ಅದರ ಆಧಾರದ ಮೇಲೆ ಅವರು ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ” ಎಂದು ಅಣ್ಣಾಮಲೈ ಹೇಳಿದ್ದಾರೆ.

ಅಣ್ಣಾಮಲೈ ಅವರು ರಾಜ್ಯಪಾಲರ ವಿರುದ್ಧ ಟೀಕೆ ವ್ಯಕ್ತಪಡಿಸಿರುವುದು ಇದೇ ಮೊದಲಲ್ಲ. ಈ ವರ್ಷದ ಜನವರಿಯಲ್ಲಿ ಮಾಧ್ಯಮವೊಂದಕ್ಕೆ ಮಾತನಾಡುತ್ತಾ, ತಮಿಳುನಾಡು ಲಾಂಛನವಿಲ್ಲದೆ ಪೊಂಗಲ್ ಆಚರಣೆಗೆ ಆಹ್ವಾನವನ್ನು ನೀಡುವ ರಾಜಭವನದ ನಿರ್ಧಾರ ತಪ್ಪು ಎಂದಿದ್ದರು. ಅಲ್ಲದೆ ತಮಿಳುನಾಡನ್ನು “ತಮಿಳಗಂ” ಎಂದು ಮರುನಾಮಕರಣ ಮಾಡುವ ರಾಜ್ಯಪಾಲರ ಸಲಹೆಗೆ ವಿರೋಧ ವ್ಯಕ್ತಪಡಿಸಿದ್ದರು.

2015ರ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಚಿವ ಸೆಂಥಿಲ್‌ ಬಾಲಾಜಿ ಅವರನ್ನು ಬಂಧಿಸಿದ್ದ ಕೆಲವು ದಿನಗಳ ನಂತರ ಸರ್ಕಾರದ ಅನುಮತಿಯಿಲ್ಲದೆ ಸಚಿವರನ್ನು ರಾಜ್ಯಪಾಲರು ಏಕಾಏಕಿ ವಜಾಗೊಳಿಸಿದ್ದರು. ನಂತರ ಕೆಲ ಗಂಟೆಗಳಲ್ಲಿ ತಮ್ಮ ನಿರ್ಧಾರವನ್ನು ವಾಪಸ್‌ ಪಡೆದಿದ್ದರು. ರಾಜ್ಯಪಾಲರ ಸರ್ವಾಧಿಕಾರಿ ಧೋರಣೆ ಈ ಕ್ರಮ ದೇಶಾದ್ಯಂತ ಟೀಕೆ ವ್ಯಕ್ತವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X