ಸರ್ಕಾರದ ಜನಪರ ಕೆಲಸದ ಪ್ರಚಾರಕ್ಕೆ ಕಾರ್ಯಕರ್ತರಿಗೆ ಕಾರ್ಯಗಾರ ಅಗತ್ಯ: ವಿನಯ್ ಕುಮಾರ್ ಸೊರಕೆ

Date:

Advertisements

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಹಲವು ಜನಪರ ಕೆಲಸಗಳು ನಡೆಯುತ್ತಿದ್ದರೂ ಅದರ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿ ತಲುಪುತ್ತಿಲ್ಲ. ಇದಕ್ಕೆ ನಮ್ಮ ಕಾರ್ಯಕರ್ತರಲ್ಲಿ ಮಾಹಿತಿಯ ಕೊರತೆ ಇರುವುದು ಕೂಡ ಒಂದು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾರ್ಯಕರ್ತರಿಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರಕಾರದ ಜನಪರ ಕೆಲಸಗಳು ಜನಸಾಮಾನ್ಯರಿಗೆ ತಲುಪಿಸಬೇಕಾದರೆ ಮೊದಲು ಕಾರ್ಯಕರ್ತರಿಗೆ ತರಬೇತಿ ನೀಡುವ ಅಗತ್ಯ ಇದೆ. ಪ್ರತೀ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕಾರ್ಯಕರ್ತರಿಗೆ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುವುದು. ಇದರ ಅಂಗವಾಗಿ ಇಂದು ರಾಜ್ಯ ಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಂಡು ಚಾಲನೆ ನೀಡಲಾಗಿದೆ ಎಂದರು.

Advertisements

ಕಾಂಗ್ರೆಸ್ ಪ್ರಚಾರ ಸಮಿತಿ ಎಂಬುದು ಚುನಾವಣೆಗೆ ಮಾತ್ರ ಸೀಮಿತ ಎಂಬ ತಪ್ಪು ಕಲ್ಪನೆ ಕಾರ್ಯಕರ್ತರಲ್ಲಿ ಇದೆ. ಚುನಾವಣೆಯ ಬಳಿಕವೂ ಪ್ರಚಾರ ಸಮಿತಿ ಕೆಲಸ ಮಾಡುತ್ತದೆ ಎಂಬುದು ಕಾರ್ಯಕರ್ತರು ಅರಿಯಬೇಕು. ಸರಕಾರದ ಜನ ಕಲ್ಯಾಣ ಕೆಲಸಗಳನ್ನು ಈ ಮೂಲಕವೇ ಜನರಿಗೆ ತಲುಪಿಸುವ ಕೆಲಸ ನಡೆಯಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರ ಮಾಡುವ ಅಭಿವೃದ್ಧಿ ಕೆಲಸಗಳ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಈ ಹಿನ್ನೆಯಲ್ಲಿ ಜನಸಾಮಾನ್ಯರಿಗೆ ಸರಕಾರದ ಅಭಿವೃದ್ಧಿಯ ಮಾಹಿತಿ ತಲುಪಿಸುವ ಕಾರ್ಯ ನಡೆಯಬೇಕಿರುವುದು ಇಂದಿನ ಅಗತ್ಯವಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ನಡೆಯುವ ಕಾರ್ಯಗಾರದಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ಸುಗೊಳಿಸಬೇಕು ಎಂದು ಅವರು ಕರೆ ನೀಡಿದರು.

ದಿವಾಳಿಯಾಗಿದ್ದ ದೇಶವನ್ನು ಬಲಿಷ್ಠಗೊಳಿಸಿದ್ದು ಕಾಂಗ್ರೆಸ್‌- ಬಿ ಎಲ್‌ ಶಂಕರ್

ಕಾಂಗ್ರೆಸ್ ನಾಯಕ ಡಾ. ಬಿ.ಎಲ್.ಶಂಕರ್ ಮಾತನಾಡಿ, ಸ್ವಾತ್ರಂತ್ರ್ಯ ಲಭಿಸುವ ಸಂದರ್ಭದಲ್ಲಿ ದಿವಾಳಿಯಾಗಿದ್ದ ದೇಶವನ್ನು ಹಲವು ಸುಧಾರಣೆಗಳನ್ನು ತಂದು ಬಲಿಷ್ಠ ರಾಷ್ಟ್ರವನ್ನಾಗಿ ಮಾಡಿರುವುದು ಕಾಂಗ್ರೆಸ್. ಇಪ್ಪತ್ತು ಅಂಶದ ಕಾರ್ಯಕ್ರಮ, ಭೂ ಸುಧಾರಣೆ, ಗರ್ಭಿ ಹಠಾವೋ ಮೊದಲಾದ ಐತಿಹಾಸಿಕ ಕಾಯ್ದೆಗಳನ್ನು ಜಾರಿ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಬಡವರ, ಸೋಷಿತರ, ನಿರ್ಗತಿಕರ ಪರವಾಗಿ ಆರಂಭದಿಂದಲೂ ಕೆಲಸ ಮಾಡುತ್ತಾ ಬಂದಿದೆ. ಕಾಂಗ್ರೆಸಿನ ಮಹತ್ವದ ಯೋಜನೆಗಳು ಇಲ್ಲದಿದ್ದರೆ ಭಾರತ ಬಡ ದೇಶವಾಗಿಯೇ ಉಳಿಯುತ್ತಿತ್ತು ಎಂದರು.

ಜಾತಿಗಣತಿ ಬಗ್ಗೆ ರಾಹುಲ್ ಗಾಂಧಿ ಧ್ವನಿ ಎತ್ತುತ್ತಿದ್ದು ಇದು ದೇಶದಲ್ಲಿ ಭಾರೀ ದೊಡ್ಡ ಸುಧಾರಣೆಗೆ ನಾಂದಿಯಾಗಲಿದೆ. ಆದರೆ ಕಾಂಗ್ರೆಸ್ ಸಿದ್ಧಾಂತದ ಬಗ್ಗೆ ನಮ್ಮ ಕಾರ್ಯಕರ್ತರಿಗೆ ಗೊಂದಲಗಳಿವೆ. ಯಾವುದೇ ಗೊಂದಲಗಳಿದ್ದರೂ ಅವುಗಳ ಬಗ್ಗೆ ಸಂಬಂಧಿಸಿದವರಲ್ಲಿ ಚರ್ಚಿಸಿ ಗೊಂದಲ ನಿವಾರಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್ ಸಂಪೂರ್ಣವಾಗಿ ಜಾತ್ಯತೀತ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದೆ. ಜಾತ್ಯತೀತ ಎಂದರೆ ಅಲ್ಪಸಂಖ್ಯಾತ ಸಮುದಾಯವನ್ನು ಓಲೈಕೆ ಮಾಡುವುದು ಅಲ್ಲ. ಈ ಬಗ್ಗೆ ತಪ್ಪು ಕಲ್ಪನೆ ನಮ್ಮ ಕಾರ್ಯಕರ್ತರಲ್ಲಿ ಇದೆ. ಯಾವುದೇ ಧರ್ಮ, ಜಾತಿ, ಭಾಷೆಯ ಆಧಾರದಲ್ಲಿ ಒಬ್ಬರು ಇನ್ನೊಬ್ಬರ ವಿರುದ್ಧ ತಾರತಮ್ಯ ಮಾಡದೆ ಸರ್ವರನ್ನೂ ಸಮಾನತೆಯಿಂದ ನೋಡುವುದು ಜಾತ್ಯತೀತತೆಯಾಗಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ ಕೆಲಸವನ್ನು ಜನರಿಗೆ ತಲುಪಿಸಿ- ಎಲ್‌ ಹನುಮಂತಯ್ಯ

ರಾಜ್ಯಸಭಾ ಮಾಜಿ ಸದಸ್ಯ ಡಾ. ಎಲ್. ಹನುಮಂತಯ್ಯ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಸವಲತ್ತುಗಳನ್ನು ಪಡೆದು ಉನ್ನತ ಮಟ್ಟದ ಹುದ್ದೆಯಲ್ಲಿರುವವರು ಹಾಗೂ ಕಾಂಗ್ರೆಸಿನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ರಾಂತಿಯಿಂದ ತಮ್ಮ ಜೀವನ ಮಟ್ಟವನ್ನೇ ಸುಧಾರಿಸಿಕೊಂಡವರು ಇಂದು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ. ಬಿಜೆಪಿ ಕೂಡಾ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಾ ಜನರಿಗೆ ತಪ್ಪು ಮಾಹಿತಿ ಒದಗಿಸುತ್ತಿದೆ. ಹಾಗಾಗಿ ನೆಹರೂ ಕಾಲದಿಂದ ಹಿಡಿದು ಮನಮೋಹನ್ ಸಿಂಗ್ ಕಾಲದವರೆಗೆ ಕಾಂಗ್ರೆಸ್ ಸರ್ಕಾರ ಮಾಡಿರುವ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ನಮ್ಮ ಕಾರ್ಯಕರ್ತರಿಂದ ಆಗಬೇಕಿದೆ ಎಂದರು.

ಯುಪಿಎ ಸರ್ಕಾರ ಜಾರಿಗೆ ತಂದ ಜನಪರ ಕಾರ್ಯಗಳು ನೋಡುವಾಗ ಎಂದೆಂದಿಗೂ ಕಾಂಗ್ರೆಸ್ ಗೆ ಸೋಲಾಗಬಾರದಿತ್ತು. ಆದರೆ ಯುಪಿಎ ಸರ್ಕಾರದ ಸಾಧನೆಗಿಂತ ಬಿಜೆಪಿಯ ಅಪಪ್ರಚಾರ ದೊಡ್ಡದಾಗಿ ದೇಶದ ಜನರಿಗೆ ತಲುಪುತ್ತಿದೆ. ಬಿಜೆಪಿ ಮತ್ತು ಅದರ ಮಿತ್ರ ಸಂಘಟನೆಗಳು ಸೃಷ್ಟಿಸುವ ಸುಳ್ಳನ್ನು ದೇಶದ ಜನತೆ ಭಾರೀ ಬೇಗ ನಂಬುತ್ತಿದ್ದಾರೆ. ಜನರಿಗೆ ಸತ್ಯ ಅರಿವಾಗಬೇಕಾದರೆ ನಮ್ಮ ಕಾರ್ಯಕರ್ತರಿಗೆ ಜನರಿಗೆ ಸರಿಯಾದ ಮಾಹಿತಿ ನೀಡುವ ಕೆಲಸ ಮಾಡಬೇಕು. ಇದಕ್ಕಾಗಿ ಇಂತಹ ಕಾರ್ಯಗಾರಗಳು ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಪ್ರಚಾರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಗಾರದಲ್ಲಿ ವಿವಿಧ ಜಿಲ್ಲೆಗಳಿಂದ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಪೆಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X