ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೆ ಗ್ಯಾರಂಟಿ ಜಾರಿಗೊಳಿಸಿ: ಬಸವರಾಜ ಬೊಮ್ಮಾಯಿ ಆಗ್ರಹ

Date:

Advertisements
  • ರಾಜ್ಯಪಾಲರ ಭಾಷಣದ ಕುರಿತ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಒತ್ತಾಯ
  • ಗ್ಯಾರಂಟಿಗಳಿಗೆ ಕಂಡಿಷನ್ ಹಾಕಿದ್ದರಿಂದ ಎಲ್ಲದಕ್ಕೂ ಏಜೆಂಟ್ ಗಳು ಹುಟ್ಟಿಕೊಂಡಿದ್ದಾರೆ

ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರಂಟಿ ಸರ್ಕಾರವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ” ಎಂದರು.

“ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿಗಳನ್ನು ಸಾಮಾನ್ಯ ಆಶ್ವಾಸನೆಗಳನ್ನೇ ವಿಶೇಷ ಎಂದು ಬಿಂಬಿಸಿದ್ದಾರೆ‌. ಗ್ಯಾರಂಟಿಗಳಿಗೆ ಜನರು ಮರುಳಾಗಿದ್ದಾರೊ ಗೊತ್ತಿಲ್ಲ. ಮನ್ನಣೆ ಕೊಟ್ಟಿದ್ದಾರೆ. ಜನರು ನೀವು ಕೊಟ್ಟ ಮಾತುಗಳನ್ನು ಹೆಚ್ಚು ನಂಬಿದ್ದಾರೆ. ಎಲ್ಲರಿಗೂ ಗೃಹ ಲಕ್ಷ್ಮಿ, ಎಲ್ಲರಿಗೂ 10 ಕೆಜಿ ಉಚಿತ ಅಕ್ಕಿ, ಎಲ್ಲರಿಗೂ ಗೃಹ ಜ್ಯೋತಿ, ಡಿಗ್ರಿಯಾದವರಿಗೆ ನಿರುದ್ಯೋಗ ಭತ್ಯೆ ಅಂತ‌ ಹೇಳಿದ್ದೀರಿ. ಈಗ ಎಲ್ಲದಕ್ಕೂ ಕಂಡಿಷನ್ ಹಾಕಿ ಎಲ್ಲದಕ್ಕೂ ಏಜೆಂಟ್ ಗಳು ಹುಟ್ಟಿಕೊಂಡಿದ್ದಾರೆ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನ; ಗೃಹ ಇಲಾಖೆಯಿಂದ ತನಿಖೆ: ಡಾ. ಜಿ ಪರಮೇಶ್ವರ್‌

“ಬಸ್ ಪ್ರಯಾಣ ಮಾತ್ರ ಆರಂಭವಾಗಿದೆ. ಅಕ್ಕಿ ಬದಲು ದುಡ್ಡು ಕೊಡುವುದಾಗಿ ಹೇಳಿದ್ದಾರೆ. ನೀವು ಕೊಡುವ ಹಣಕ್ಕೆ ಎರಡೂವರೆ ಕೆಜಿ ಅಕ್ಕಿ ಬರುತ್ತದೆ. ನೀವು ಘೋಷಣೆ ಮಾಡಿರುವಂತೆ ಎಲ್ಲ ಯೋಜನೆಗಳ ಜಾರಿಗೆ 52 ಸಾವಿರ ಕೋಟಿ ಖರ್ಚಾಗುತ್ತದೆ ಅಂತ ನೀವೇ ಹೇಳಿದ್ದೀರಿ. ಆದರೆ, ಎಲ್ಲದಕ್ಕೂ ಕಂಡಿಷನ್ ಹಾಕಿರೋದರಿಂದ ಸುಮಾರು 20 ರಿಂದ 25 ಸಾವಿರ ಕೊಟಿ ಮಾತ್ರ‌ ಖರ್ಚಾಗಬಹುದು” ಎಂದರು.

ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಹೆಚ್ಚಾಗಿದೆ. ಇತರ ಟ್ಯಾಕ್ಸ್ ಸಂಗ್ರಹ ಕೂಡ ಹೆಚ್ಚಾಗಿದೆ. ಈ ಸರ್ಕಾರ ಹೆಚ್ಚಿನ ಸಾಲ ತೆಗೆದುಕೊಳ್ಳುವ ಅಗತ್ಯವಿಲ್ಲ. ನಾನು ಸರಪ್ಲಸ್ ಬಜೆಟ್ ಮಂಡನೆ ಮಾಡಿದ್ದೇನೆ. 78 ಸಾವಿರ ಕೋಟಿ ಸಾಲ ತೆಗೆದುಕೊಳ್ಳಲು ಅವಕಾಶ ಇದೆ‌ ಅಷ್ಟು ಮಾತ್ರ ತೆಗೆದುಕೊಂಡರೆ ಸಾಕು. ಮೂಲ ಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಮೀಸಲಿಟ್ಟ ಹಣವನ್ನು ಬಳಕೆ‌ ಮಾಡಬಹುದು. ಎಲ್ಲ ನೀರಾವರಿ ಯೋಜನೆ, ಶಿಕ್ಷಣ ಇಲಾಖೆ ಯೋಜನೆ, ಕೃಷಿ ಹಾಗೂ ಸೇವಾ ವಲಯಕ್ಕೆ ಆದ್ಯತೆ ನೀಡಬೇಕು. ಅದನ್ನು ಬಿಟ್ಟು ಜನರ ದುಡ್ಡನ್ನು ಕಸಿದುಕೊಂಡು ಇನ್ನೊಂದು ಕಡೆ ಕೊಟ್ಟ ಹಾಗೆ ಆಗುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಈ ಬುದ್ಧಿ ನಿಮಗೆ ಮೊದಲೇ ಬಂದಿದ್ದರೆ. ಈಗ ಎಲ್ಲಿ ಇರುತ್ತಿದಿರಿ ನೀವು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X