ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬಜಪೆ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ರಶೀದ್ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ಮಾಡಿ ಪೋಸ್ಟ್ ಹಾಕಿದ್ದ ಇಬ್ಬರು ಸಂಘಪರಿವಾರದ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಂಘಪರಿವಾರದ ಮುಖಂಡ ಮೂಡಬಿದ್ರೆಯ ಸಮಿತ್ ರಾಜ್ ದರೆಗುಡ್ಡೆ ಹಾಗೂ ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಉಲ್ಲಾಸ್ ಕೆ.ಟಿ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಇದನ್ನು ಓದಿದ್ದೀರಾ? ಬೆಳ್ತಂಗಡಿ | ಶಾಸಕ ಹರೀಶ್ ಪೂಂಜಾರನ್ನು ರೌಡಿಶೀಟರ್ ಎಂದು ಪರಿಗಣಿಸಿ ಗಡಿಪಾರು ಮಾಡಿ: ರಕ್ಷಿತ್ ಶಿವರಾಂ
ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ವಿನಾಕಾರಣ ನನ್ನ ಹೆಸರು ಎಳೆದು ತಂದಿದ್ದಾರೆ. ಯಾವುದೇ ಆಧಾರ ಇಲ್ಲದೆ ನನ್ನ ಹೆಸರು ಹಾಕಿ ಅವಹೇಳನ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲಾಗುತ್ತಿದೆ ಎಂದು ಹೆಡ್‌ಕಾನ್ಸ್ಟೇಬಲ್ ರಶೀದ್ ಅವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾ
