ಶಾಸಕಾಂಗ ಪಕ್ಷದ ನಾಯಕ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ವಿಧಾನಸೌಧದ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದರು.
ಬಜೆಟ್ ಮತ್ತು ಸದನದಲ್ಲಿ ಒಗ್ಗಟ್ಟು ಪ್ರದರ್ಶಿಸುವಂತೆ ಹಾಗೂ ಹೇಗೆಲ್ಲ ಮಾತನಾಡಬೇಕು ಎಂಬುದರ ಬಗ್ಗೆ ಶಾಸಕರಿಗೆ ಸಿಎಂ ಸೂಚನೆ ನೀಡಿದ್ದು, ಗ್ಯಾರಂಟಿಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಲು ಕಿವಿಮಾತು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12 ಗಂಟೆಗೆ 14ನೇ ದಾಖಲೆ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಮುಖ್ಯಮಂತ್ರಿ ನಿವಾಸದಿಂದ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧಕ್ಕೆ ಮೈಸೂರು ಪಂಚೆ, ಶಲ್ಯ ಧರಿಸಿ ಹೊಸ ಮುಖಕಳೆಯೊಂದಿಗೆ ಆಗಮಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಜ್ಯಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ನೀಡದ ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ
ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿ, ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಬಜೆಟ್ ವಿಚಾರದಲ್ಲಿ ರಾಜ್ಯದ ಜನರಿಗೆ ಬೆಟ್ಟದಷ್ಟು ನಿರೀಕ್ಷೆ ಗರಿಗೆದರಿವೆ.
ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳು ರಾಜ್ಯದ ಜನರ ನಿರೀಕ್ಷೆಯನ್ನ ಹೆಚ್ಚಿಸಿದ್ದು. ಬಜೆಟ್ನಲ್ಲಿ ಏನೆಲ್ಲ ಭಾಗ್ಯಗಳು ಸಿಗಲಿದೆ ಎಂದು ನಾಡಿನ ಜನ ಎದುರು ನೋಡುತ್ತಿದ್ದಾರೆ.