ಹೆಚ್ಚಿನ ಪ್ರವಾಸಿಗರು ಸೇರಿದಂತೆ 26 ಮಂದಿಯ ಹತ್ಯೆ ಮಾಡಲಾದ ಪಹಲ್ಗಾಮ್ ದಾಳಿ ಬಳಿಕ ಭಾರತ ‘ಆಪರೇಷನ್ ಸಿಂಧೂರ’ ಆರಂಭಿಸಿದೆ. ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದೆ. ಭಾರತೀಯ ಸೇನೆ ನಡೆಸಿದ ಕ್ಷಿಪಣಿ ದಾಳಿಯನ್ನು ಪಕ್ಷಾತೀತವಾಗಿ ರಾಜಕಾರಣಿಗಳು ಶ್ಲಾಘಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ, “ಜೈ ಹಿಂದ್” ಎಂಬ ಪೋಸ್ಟ್‌ಗಳನ್ನು ಮಾಡಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ‘ಭಾರತ್ ಮಾತಾ ಕಿ ಜೈ’ ಎಂದು ಪೋಸ್ಟ್ ಮಾಡಿದರೆ, ವಿದೇಶಾಂಗ ಸಚಿವ ಎಸ್ ಜೈಶಂಕರ್, “ಭಯೋತ್ಪಾದನೆಗೆ ಜಗತ್ತು ಶೂನ್ಯ ಸಹಿಷ್ಣುತೆಯನ್ನು ತೋರಿಸಬೇಕು” ಎಂದು ಹೇಳಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, “ಸೇನೆಯ ಬಗ್ಗೆ ಹೆಮ್ಮಿಯಿದೆ. ಜೈ ಹಿಂದ್” ಎಂದಿದ್ದಾರೆ.
ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಭಾರತದ ವಿಮಾನಗಳನ್ನು ನಾವೂ ಹೊಡೆದುರುಳಿಸಿದ್ದೇವೆ ಎಂದ ಪಾಕ್
ಇನ್ನು ಭಾರತೀಯ ಪಡೆಗಳು ರಾತ್ರೋರಾತ್ರಿ ನಡೆಸಿದ ಮಿಲಿಟರಿ ಕ್ರಮವನ್ನು ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಸ್ವಾಗತಿಸಿದ್ದಾರೆ. ಉರ್ದು ಮತ್ತು ಹಿಂದಿಯಲ್ಲಿ ಆನ್‌ಲೈನ್ ಪೋಸ್ಟ್ ಮಾಡಿದ್ದಾರೆ. “ಪಾಕಿಸ್ತಾನಕ್ಕೆ ಕಠಿಣ ಪಾಠ ಕಲಿಸುವ ಅಗತ್ಯವಿದೆ” ಎಂದು ಓವೈಸಿ ಹೇಳಿದ್ದಾರೆ.
Proud of our Armed Forces. Jai Hind!
— Rahul Gandhi (@RahulGandhi) May 7, 2025
“ನಮ್ಮ ರಕ್ಷಣಾ ಪಡೆಗಳು ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ನಡೆಸಿದ ಸರ್ಜಿಕಲ್ ಸ್ಟ್ರೈಕ್‌ಗಳನ್ನು ನಾನು ಸ್ವಾಗತಿಸುತ್ತೇನೆ. ಮತ್ತೊಂದು ಪಹಲ್ಗಾಮ್ ಮತ್ತೆಂದೂ ಸಂಭವಿಸದಂತೆ ಪಾಕಿಸ್ತಾನಕ್ಕೆ ಕಠಿಣ ಪಾಠ ಕಲಿಸಬೇಕು. ಪಾಕಿಸ್ತಾನದ ಭಯೋತ್ಪಾದಕ ಮೂಲಸೌಕರ್ಯವನ್ನು ಸಂಪೂರ್ಣವಾಗಿ ನಾಶಪಡಿಸಬೇಕು. ಜೈ ಹಿಂದ್” ಎಂದು ಓವೈಸಿ ಪೋಸ್ಟ್ ಮಾಡಿದ್ದಾರೆ.
मैं हमारी रक्षा सेनाओं द्वारा पाकिस्तान में आतंकवादी ठिकानों पर किए गए लक्षित हमलों का स्वागत करता हूँ। पाकिस्तानी डीप स्टेट को ऐसी सख्त सीख दी जानी चाहिए कि फिर कभी दूसरा पहलगाम न हो। पाकिस्तान के आतंक ढांचे को पूरी तरह नष्ट कर देना चाहिए। जय हिन्द! #OperationSindoor
— Asaduddin Owaisi (@asadowaisi) May 7, 2025
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಶಿವಸೇನಾ ನಾಯಕ ಏಕನಾಥ್ ಶಿಂದೆ, “ಜೈ ಹಿಂದ್. ಆಪರೇಷನ್ ಸಿಂಧೂರ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದರೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು “ಜೈ ಹಿಂದ್, ಸೇನೆಗೆ ಜಯವಾಗಲಿ” ಎಂದು ಬರೆದುಕೊಂಡಿದ್ದಾರೆ.
ಇದನ್ನು ಓದಿದ್ದೀರಾ? BREAKING NEWS : ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪಾಕ್ ಭಯೋತ್ಪಾದಕರ ನೆಲೆಗಳ ಮೇಲೆ ಭಾರತದಿಂದ ವಾಯು ದಾಳಿ
India's commitment to eliminating all sources of terrorism in Pakistan and PoK has necessarily to be uncompromising and always be anchored in the supreme national interest. This is a time for unity and solidarity. Right from the night of April 22nd, the INC has been categorically…
— Jairam Ramesh (@Jairam_Ramesh) May 7, 2025
ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸೇನೆಯೊಂದಿಗೆ ನಾವಿದ್ದೇವೆ ಎಂದಿದ್ದಾರೆ. “ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಭಯೋತ್ಪಾದನೆಯ ಎಲ್ಲಾ ಮೂಲಗಳನ್ನು ನಿರ್ಮೂಲನೆ ಮಾಡುವ ಭಾರತದ ಬದ್ಧತೆಯಲ್ಲಿ ಯಾವುದೇ ರಾಜಿಯಾಗದಂತಿರಬೇಕು. ರಾಷ್ಟ್ರೀಯ ಹಿತಾಸಕ್ತಿಯೇ ಯಾವಾಗಲೂ ಸರ್ವೋಚ್ಚ. ಇದು ಏಕತೆ ಮತ್ತು ಒಗ್ಗಟ್ಟಿನ ಸಮಯ. ಏಪ್ರಿಲ್ 22ರ ರಾತ್ರಿಯಿಂದಲೇ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ರಾಷ್ಟ್ರದ ಪ್ರತಿಕ್ರಿಯೆಯಲ್ಲಿ ನೀಡಲು ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲವಿರುತ್ತದೆ ಎಂದು ಕಾಂಗ್ರೆಸ್ ಸ್ಪಷ್ಟವಾಗಿ ಹೇಳುತ್ತಿದೆ. ಕಾಂಗ್ರೆಸ್ ನಮ್ಮ ಸೇನಾಪಡೆಗಳೊಂದಿಗೆ ದೃಢವಾಗಿ ನಿಂತಿದೆ” ಎಂದು ಹೇಳಿದ್ದಾರೆ. ಆಪರೇಷನ್ ಸಿಂಧೂರ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಎಕ್ಸ್‌ನಲ್ಲಿ ಹೇಳಿದರು.
जय हिंद! जय भारत!
— Tejashwi Yadav (@yadavtejashwi) May 6, 2025
न आतंक रहे, न अलगाववाद रहे!
हमें अपने वीर जवानों और भारतीय सेना पर गर्व है। #IndianArmy
ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, “ಭಾರತಕ್ಕೆ ಜಯವಾಗಲಿ! ಭಯೋತ್ಪಾದನೆಯಾಗಲಿ ಅಥವಾ ಪ್ರತ್ಯೇಕತಾವಾದವಾಗಲಿ ಇರಬಾರದು! ನಮ್ಮ ಧೈರ್ಯಶಾಲಿ ಯೋಧರು ಮತ್ತು ಭಾರತೀಯ ಸೇನೆಯ ಬಗ್ಗೆ ನಮಗೆ ಹೆಮ್ಮೆಯಿದೆ” ಎಂದು ಹೇಳಿದ್ದಾರೆ. ಇನ್ನು ಅವರ ತಂದೆ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, “ಜೈ ಹಿಂದ್” ಎಂದಿದ್ದಾರೆ.
