ದೇಶದ ಸುಮಾರು 26 ಜನರನ್ನು ಬಲಿ ಪಡೆದುಕೊಂಡ ಪಹಲ್ಗಾಮ್‌ಗೆ ಪ್ರತೀಕಾರವಾಗಿ ಭಾರತೀಯ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಬಲಿಸಿದ್ದಾರೆ.
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಟಿಆರ್ಎಫ್ ಹೊತ್ತುಕೊಂಡಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರವನ್ನು ನಡೆಸಲಾಗಿದೆ.
ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಮಹಿಳಾ ಅಧಿಕಾರಿಗಳಾದ ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್ ಯಾರು?
ಮಂಗಳವಾರ ಬೆಳಗಿನ ಜಾವ 1.05ಕ್ಕೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಜೈಶ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಭಾರತ ದಾಳಿ ನಡೆಸಿದೆ.
ಈ ದಾಳಿಯನ್ನು ನಡೆಸಿದ ಭಾರತೀಯ ಪಡೆಗಳಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮ ಪಕ್ಷದ ಪರವಾಗಿ, ಶುಭಾಶಯ ತಿಳಿಸಿದ್ದಾರೆ. “ಸೇನೆಗೆ ನಮ್ಮ ಸಂಪೂರ್ಣ ಬೆಂಬಲವಿದೆ” ಎಂದು ಹೇಳಿದ್ದಾರೆ. ಬುಧವಾರ ಮಧ್ಯಾಹ್ನ ನಡೆದ ಕಾಂಗ್ರೆಸ್ ಸಭೆಯ ನಂತರ ಈ ಹೇಳಿಕೆಯನ್ನು ನೀಡಿದ್ದಾರೆ.
VIDEO | Here's what Congress President Mallikarjun Kharge (@kharge) said on #OperationSindoor
— Press Trust of India (@PTI_News) May 7, 2025
"We had called the Working Committee meeting today because of the incident that has taken place in our country and the steps the government is taking in response. We are extremely proud… pic.twitter.com/3PQMC3J03M
ಮಲ್ಲಿಕಾರ್ಜುನ ಖರ್ಗೆ ಕೂಡ ಇದೇ ಹೇಳಿಕೆಯನ್ನು ನೀಡಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನಕ್ಕೆ ‘ಆಪರೇಷನ್ ಸಿಂಧೂರ’ ನಡೆಸಿ ಸೂಕ್ತ ಪ್ರತ್ಯುತ್ತರ ನೀಡಿದ ನಮ್ಮ ಭದ್ರತಾ ಪಡೆಗಳ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್‌ಗೆ ಕರೆ ಬಂದಿದ್ದು, ಗುರುವಾರ ನಿಗದಿಯಾಗಿರುವ ಸರ್ವಪಕ್ಷ ಸಭೆಗೆ ಆಹ್ವಾನಿಸಲಾಗಿದೆ. ಈ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಭಾಗಿಯಾಗಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
“ನಾವು ಸಭೆಯಲ್ಲಿ ಭಾಗಿಯಾಗುತ್ತೇವೆ. ರಾಹುಲ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಇದು ದೇಶದ ವಿಷಯ. ನಾವು ದೇಶದ ವಿಚಾರದಲ್ಲಿ ಒಗ್ಗಟ್ಟಿನಿಂದ ಇರಬೇಕು ಎಂದು ನಾವು ಮೊದಲಿನಿಂದಲೇ ಹೇಳುತ್ತಿದ್ದೇವೆ. ರಾಷ್ಟ್ರದ ಹಿತಾಸಕ್ತಿಗಾಗಿ ಯಾವುದೇ ಸಭೆಯನ್ನು ಕರೆದರೂ ಅದರಲ್ಲಿ ಭಾಗಿಯಾಗಿ ನಮ್ಮ ಅಭಿಪ್ರಾಯ ಮಂಡಿಸುತ್ತೇವೆ” ಎಂದು ಕಾಂಗ್ರೆಸ್ ಸಭೆಯ ನಂತರ ಖರ್ಗೆ ಹೇಳಿದರು.
