ಹಾವೇರಿ | ʼಆಪರೇಷನ್ ಸಿಂಧೂರ್ʼ; ಭಾರತೀಯ ಸೇನೆಗೆ ಡಿವೈಎಫ್ಐ ನಮನ

Date:

Advertisements

“ಆಪರೇಷನ್ ಸಿಂಧೂರ್ ಘೋಷಣೆಯಡಿ ಭಯೋತ್ಪಾದನೆಯ ವಿರುದ್ಧ ಸದೃಢ ನಿಲುವು ತೆಗೆದುಕೊಂಡು, ಉಗ್ರಗಾಮಿಗಳ ನೆಲೆಗಳ ನೆಲೆಗಳ ಮೇಲೆ  ಭಾರತೀಯ ಸಶಸ್ತ್ರ ಪಡೆ ದಾಳಿ ನಡೆಸಿದ್ದಕ್ಕೆ ಭಾರತೀಯ ಸೇನೆಗೆ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿಯು  ನಮನಗಳನ್ನು ಸಲ್ಲಿಸುತ್ತದೆ” ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದ್ದಾರೆ.

ಹಾವೇರಿ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು. “ಪಹಲ್ಗಾಮ್ನಲ್ಲಿ ಅಮಾಯಕ ನಾಗರಿಕರನ್ನು ಕ್ರೂರವಾಗಿ ಹತ್ಯೆಗೈದದ್ದು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ. ಈ ಘೋರ ಕೃತ್ಯದ ನಂತರ ದೇಶದ ಜನತೆ ಭಯೋತ್ಪಾದನೆಯ ವಿರುದ್ಧ  ಬಲವಾಗಿ ಪ್ರತಿರೋಧಿಸಿತು. ಡಿವೈಎಫ್ಐ ಸಂಘಟನೆಯು ಭಯೋತ್ಪಾದನೆಯ ವಿರುದ್ಧ ದೃಢ ನಿಲುವು ತೆಗೆದುಕೊಂಡು ಪ್ರತಿರೋಧ ವ್ಯಕ್ತಪಡಿಸಿದೆ” ಎಂದು ಹೇಳಿದರು.

“ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರತಿಯೊಂದು ರಾಜಕೀಯ ಪಕ್ಷವು ಸರ್ಕಾರದ ಕ್ರಮಗಳಿಗೆ ಸಂಪೂರ್ಣ ಬೆಂಬಲವನ್ನು ನೀಡಿದ್ದವು. ಇದು ಭಯೋತ್ಪಾದನೆಯ ವಿರುದ್ಧ ದೇಶದ ಒಗ್ಗಟ್ಟನ್ನು ಪ್ರತಿಬಿಂಬಿಸುತ್ತದೆ” ಎಂದು ಅಭಿನಂದನೆ ತಿಳಿಸಿದರು.

Advertisements

“ನಿನ್ನೆ ರಾತ್ರಿ, ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಿಒಕೆಯೊಳಗಿನ ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ನಿಖರವಾದ ಮತ್ತು ಅನುಕರಣೀಯ ಮಿಲಿಟರಿ ಕಾರ್ಯಾಚರಣೆಯನ್ನು ನಡೆಸಿತು. ಈ ಕಾರ್ಯಾಚರಣೆಯು ನಮ್ಮ ಸಶಸ್ತ್ರ ಪಡೆಗಳ ಧೈರ್ಯ ಮತ್ತು ದಕ್ಷತೆಗೆ ಸಾಕ್ಷಿಯಾಗಿದೆ. ಅವರ ಶೌರ್ಯ ಮತ್ತು ಅಚಲ ಬದ್ಧತೆಯು ರಾಷ್ಟ್ರದ ಹೆಮ್ಮೆಯಾಗಿದೆ” ಎಂದು ಡಿವೈಎಫ್ಐ ಭಾವಿಸುತ್ತದೆ.

“ಧಾರ್ಮಿಕ ಭಯೋತ್ಪಾದನೆ, ಕೋಮುವಾದ ಮತ್ತು ನಮ್ಮ ರಾಷ್ಟ್ರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವ ವಿಭಜಕ ಶಕ್ತಿಗಳ ವಿರುದ್ಧ ಡಿವೈಎಫ್ಐ ಯಾವಾಗಲೂ ನಿಂತಿದೆ. ತ್ಯಾಗ ಮತ್ತು ಪ್ರತಿರೋಧದ ಪರಂಪರೆಯೊಂದಿಗೆ, ನಮ್ಮ ದೇಶದ ಏಕತೆಯನ್ನು ಮುರಿಯುವ ಎಲ್ಲಾ ಪ್ರಯತ್ನಗಳನ್ನು ಡಿವೈಎಫ್ಐ ವಿರೋಧಿಸುವುದನ್ನು ಮುಂದುವರಿಸುತ್ತದೆ. ಕ್ರೂರ ಪಹಲ್ಗಾಮ್ ದಾಳಿಯ ಹಿಂದಿನ ನಿಜವಾದ ಅಪರಾಧಿಗಳು ಮತ್ತು ಮಾಸ್ಟರ್ ಮೈಂಡ್ಗಳನ್ನು ಗುರುತಿಸಿ ಮಟ್ಟಹಾಕಬೇಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಎಡಿಎಸ್ಎಸ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

“ಈ ಕ್ರಮಗಳ ಜೊತೆಗೆ, ಪಹಲ್ಗಾಮ್ನಲ್ಲಿ ಅಮಾಯಕರ ಹತ್ಯಾಕಾಂಡಕ್ಕೆ ಕಾರಣರಾದವರನ್ನು ಹಸ್ತಾಂತರಿಸಲು ಮತ್ತು ಯಾವುದೇ ಭಯೋತ್ಪಾದಕ ಶಿಬಿರಗಳು ತನ್ನ ಭೂಪ್ರದೇಶದಿಂದ ಕಾರ್ಯನಿರ್ವಹಿಸದಂತೆ ನೋಡಿಕೊಳ್ಳಲು ಪಾಕಿಸ್ತಾನದ ಮೇಲೆ ಒತ್ತಡವನ್ನು ಮುಂದುವರೆಸಬೇಕು. ಭಾರತ ಸರ್ಕಾರವು ಜನರ ಏಕತೆ ಮತ್ತು ದೇಶದ ಸಮಗ್ರತೆಯನ್ನು ರಕ್ಷಿಸುವುದನ್ನು ಖಚಿತಪಡಿಸಬೇಕು” ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.

WhatsApp Image 2024 10 05 at 15.43.57 586b60ff min e1728123396595
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X