ಉತ್ತರಾಖಂಡ್‌ನ ಉತ್ತರಕಾಶಿ ಜಿಲ್ಲೆಯಲ್ಲಿ ಗಂಗೋತ್ರಿಗೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಪತನವಾಗಿ ಐವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮೂಲಗಳ ಪ್ರಕಾರ 7 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್ ಪತನವಾದ ನಂತರ ಸ್ಥಳೀಯ ನಿವಾಸಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಉತ್ತರಕಾಶಿ ಜಿಲ್ಲೆಯ ಗಂಗನಾನಿ ಬಳಿ ಹೆಲಿಕಾಪ್ಟರ್ ಪತನವಾಗಿರುವುದಾಗಿ ಗರ್‌ವಾಲ್ ವಿಭಾಗೀಯ ಆಯುಕ್ತ ವಿಜಯ್ ಶಂಕರ್ ಪಾಂಡೆ ದೃಢೀಕರಿಸಿದ್ದಾರೆ. ಸ್ಥಳೀಯ ಪೊಲೀಸರು, ವಿಪತ್ತು ನಿರ್ವಹಣ ತಂಡ, ಆಂಬ್ಯುಲೆನ್ಸ್ ಮುಂತಾದ ತಂಡಗಳು ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.