ಭಾರತದಿಂದ ಮತ್ತೆ ದಾಳಿ; ಲಾಹೋರ್‌ನ ರಕ್ಷಣಾ ವ್ಯವಸ್ಥೆ ಧ್ವಂಸ

Date:

Advertisements

ಆಪರೇಷನ್ ಸಿಂಧೂರ್‌ ಕಾರ್ಯಚರಣೆಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಭಾರತದಲ್ಲಿನ 15 ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದೆ. ಇದರ ಬೆನ್ನಲ್ಲೇ ಭಾರತ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಧ್ವಂಸಗೊಳಿಸಿದೆ ಎಂದು ಸರಕಾರದ ಮೂಲಗಳು ತಿಳಿಸಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿದೆ.

ಭಾರತೀಯ ಸೇನೆಯಿಂದ ಪಾಕಿಸ್ತಾನದ ಲಾಹೋರ್, ಕರಾಚಿ, ಸಿಯೋಲ್‌ ಕೋಟ್‌ ಮೇಲೆ ದಾಳಿ ನಡೆಸಲಾಗಿದೆ. ಭಾರತದ ಮೇಲೆ ಪಾಕ್ ದಾಳಿಯನ್ನು ವಿಫಲಗೊಳಿಸಿದ ಬಳಿಕ ಭಾರತೀಯ ಸೇನೆಯಿಂದ ದಾಳಿ ನಡೆಸಲಾಗಿದೆ.

ಲಾಹೋರ್‌ನಲ್ಲಿ ಚೀನಾ ಅಭಿವೃದ್ಧಿಪಡಿಸಿದ ಪಾಕಿಸ್ತಾನದ ಎಚ್‌ಕ್ಯೂ-9 ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಘಟಕಗಳನ್ನು ಇಸ್ರೇಲ್ ನಿರ್ಮಿತ ಭಾರತದ ಎಚ್‌ಎಆರ್‌ಒಪಿ ಡ್ರೋನ್‌ಗಳು ಹೊಡೆದುರುಳಿಸಿದೆ.

Advertisements

ಲಾಹೋರ್ ಬಳಿ ಒಂದು ಡ್ರೋನ್ ಪತನಗೊಂಡಿದೆ. ಲಾಹೋರ್‌ನಲ್ಲಿ ನಾಲ್ವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಮತ್ತು ಸಿಂಧ್‌ನ ಮಿಯಾನೋದಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದಾನೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನಾರ್ದನ ರೆಡ್ಡಿಗೆ ಜೈಲು: ಇದು ಜನಸಾಮಾನ್ಯರ ಜಯ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತದ ಆಪರೇಷನ್ ಸಿಂಧೂರ ಕಾರ್ಯಚರಣೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಮೇ 7 ಮತ್ತು 8ರ ಮಧ್ಯರಾತ್ರಿ ಪಾಕಿಸ್ತಾನ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್ ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ ಸೇರಿದಂತೆ ಹಲವೆಡೆ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಿ ದಾಳಿ ಮಾಡಲು ಪ್ರಯತ್ನಿಸಿತು. ಆದರೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಿ ದಾಳಿ ಮಾಡಲು ಪ್ರಯತ್ನಿಸಿತು.

ಆದರೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ರಷ್ಯಾ ನಿರ್ಮಿತ ಎಸ್ -400 ‘ಸುದರ್ಶನ್ ಚಕ್ರ’ ವಾಯುರಕ್ಷಣಾ ವ್ಯವಸ್ಥೆಗಳು ವಿಫಲಗೊಳಿಸಿದೆ ಎಂದು ಸರಕಾರ ಹೇಳಿಕೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X