ಮೀನುಗಾರರ ‘ಕೈ’ ಹಿಡಿದ ಬಜೆಟ್ : ಭರಫೂರ ಭರವಸೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

Date:

Advertisements

3.27 ಲಕ್ಷ ಕೋಟಿ ರೂ.ಯ 14ನೇ ಬಜೆಟ್ ಅನ್ನು ಶುಕ್ರವಾರ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೀನುಗಾರರಿಗೆ ಭರಪೂರ ಭರವಸೆಯನ್ನು ಘೋಷಿಸಿದ್ದಾರೆ. ಆ ಮೂಲಕ ಸಂಕಷ್ಟದಲ್ಲಿರುವ ಮೀನುಗಾರಿಕಾ ಕ್ಷೇತ್ರವನ್ನು ಲಾಭದಾಯಕ ಉದ್ಯಮವನ್ನಾಗಿ ಮಾಡುವ ಗುರಿಯನ್ನಿಟ್ಟುಕೊಂಡಿದ್ದಾರೆ.

ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರದ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ. ಗಳಿಂದ 3 ಲಕ್ಷ ರೂ. ಗಳಿಗೆ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇದರ ಜೊತೆಗೆ ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್‌ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸುವ ಭರವಸೆ ನೀಡಿದ್ದು, ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವಾಗಲಿದೆ ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್‌ ಗಾತ್ರ 3.27 ಲಕ್ಷ ಕೋಟಿ ರೂ. | 5 ಗ್ಯಾರಂಟಿ ಯೋಜನೆಗಳಿಗೆ ಬೇಕು ರೂ. 52,000 ಕೋಟಿ

ಮೀನುಗಾರಿಕಾ ದೋಣಿಗಳಲ್ಲಿನ ಸೀಮೆಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್‌-ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ಹಾಗೂ ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ.

ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿಗಳನ್ನು ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಗೆ ಇರುವ ವಿಪುಲ ಅವಕಾಶಗಳನ್ನು ಉಪಯೋಗಿಸುವುದಾಗಿ ತಿಳಿಸಿರುವ ಸರ್ಕಾರ, ಹೆಚ್ಚಿನ ಬೇಡಿಕೆಯಿರುವ ಕಾಟ್ಲಾ ಮತ್ತು ರೋಹು ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಯನ್ನು ಪ್ರೋತ್ಸಾಹಿಸುವುದಾಗಿಯೂ ತಿಳಿಸಿದೆ.

ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಲು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದು, ಮೀನುಗಾರಿಕೆಗೆ ಈಗ ಲಭ್ಯವಿರುವ ಶೈತ್ಯಾಗಾರಗಳನ್ನು ದುಪ್ಪಟ್ಟುಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X