ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳು 26 ಭಾರತೀಯ ಪ್ರವಾಸಿಗರನ್ನು ಕೊಂದಿದ್ದಕ್ಕೆ ಭಾರತೀಯ ಸೇನೆಯು “ಆಪರೇಷನ್ ಸಿಂಧೂರ್” ನಡೆಸಿ ಉಗ್ರಗಾಮಿಗಳ ಅಡಗುತಾಣಗಳನ್ನು ಯಶಸ್ವಿಯಾಗಿ ನಾಶಪಡಿಸಿದೆ.
ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಮತ್ತು ದೇಶದಲ್ಲಿ ಶಾಂತಿಯತ್ತ ಮುನ್ನಡೆಯುತ್ತಿರುವ ನಮ್ಮ ಹೆಮ್ಮೆಯ ಸೈನಿಕರನ್ನು ಬಲಪಡಿಸಲು ರಾಜ್ಯದಾದ್ಯಂತದ ಎಲ್ಲಾ ಮಸೀದಿಗಳಲ್ಲಿ ಅವರ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲು ಸೂಕ್ತ ಸೂಚನೆಗಳನ್ನು ನೀಡುವಂತೆ ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್. ಜಮೀರ್ ಖಾನ್ ನಿರ್ದೇಶಿಸಿದ್ದಾರೆ.
ಆದ್ದರಿಂದ, ಶುಕ್ರವಾರದ ಜುಮ್ಮಾ ನಮಾಝಿನ ಬಳಿಕ ದೇಶದ ಶಾಂತಿ ಸೌಹಾರ್ದತೆಗಾಗಿ ಮತ್ತು ಭಾರತೀಯ ಸೇನೆಯ ಸೈನಿಕರನ್ನು ಬಲಪಡಿಸುವ ಸಲುವಾಗಿ ಪ್ರಾರ್ಥಿಸಲು ತಿಳಿಸಿದ್ದು, ಉಡುಪಿ ಜಿಲ್ಲೆಯ ಎಲ್ಲಾ ವಕ್ಸ್ ಸಂಸ್ಥೆಗಳಲ್ಲಿ ಜುಮ್ಮಾ ನಮಾಝ್ ಬಳಿಕ ಈ ಬಗ್ಗೆ ವಿಶೇಷ ಪ್ರಾರ್ಥನೆ ಸಲ್ಲಿಸಬೇಕೆಂದು ಜಿಲ್ಲಾ ವಕ್ ಅಧಿಕಾರಿ ಸೂಚನೆ ನೀಡಿದ್ದಾರೆ.