ಶಿಡ್ಲಘಟ್ಟ ತಾಲೂಕಿನ ಆನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ ಬುಧವಾರ ಅವಿರೋಧ ಆಯ್ಕೆಯಾದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ್ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನ ಬಿಸಿಎಂ(ಎ) ವರ್ಗಕ್ಕೆ ಮೀಸಲಾಗಿತ್ತು. ಜಪ್ತಿ ಹೊಸಹಳ್ಳಿ ಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ನಾಮಪತ್ರಗಳ ಪ್ರಕ್ರಿಯೆಯನ್ನು ಪರಿಶೀಲಿಸಿ ಜಪ್ತಿಹೊಸಹಳ್ಳಿ ಪ್ರಕಾಶ್ ಅವರನ್ನು ಅವಿರೋಧವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಣೆ ಮಾಡಿದರು.
2010ರಲ್ಲಿ ಒಂದು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಅನುಭವ ಹೊಂದಿರುವ ಜಪ್ತಿ ಹೊಸಹಳ್ಳಿ ಪ್ರಕಾಶ್ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದು, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುವುದು. ಪಂಚಾಯಿತಿಯನ್ನು ಜಿಲ್ಲೆಯಲ್ಲಿ ಮಾತ್ರವಲ್ಲದೆ ಕರ್ನಾಟಕ ರಾಜ್ಯದಲ್ಲಿ ಮಾದರಿ ಮಾಡುವ ಸಂಕಲ್ಪ ಹೊಂದಿದ್ದೇನೆ ಎಂದು ಹೇಳಿದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾದ ಜಪ್ತಿಹೊಸಹಳ್ಳಿ ಪ್ರಕಾಶ್ ಅವರನ್ನು ಕಾಂಗ್ರೆಸ್ ಮುಖಂಡರಾದ ಆಂಜನಪ್ಪ (ಪುಟ್ಟು), ಕೆಎಂಎಫ್ ನಿರ್ದೇಶಕ ಶ್ರೀನಿವಾಸ್ ರಾಮಯ್ಯ, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಕಾಳಿನಾಯಕನಹಳ್ಳಿ ಭೀಮೇಶ್, ವೈ ಹುಣಸೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುರಳಿ, ರಾಜಕುಮಾರ್ ಹಾರ ಹಾಕಿ ಅಭಿನಂದಿಸಿದರು. ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ನೇತ್ರಾವತಿ ಮುರಳಿ, ಮಾಜಿ ಅಧ್ಯಕ್ಷ ಹೆಚ್.ಎನ್.ವೆಂಕಟೇಶ್, ಮಾಜಿ ಉಪಾಧ್ಯಕ್ಷ ಪಿ.ಎನ್. ವಿಜೇಂದ್ರ, ಗ್ರಾಪಂ ಸದಸ್ಯರಾದ ಬಿ.ಎನ್.ವಿಶ್ವಾಸ್, ನರಸಿಂಹಮೂರ್ತಿ, ಎ.ಮುರಳಿ, ಅರುಣ್‌ಕುಮಾರ್, ವರಲಕ್ಷ್ಮಿ ಸಂತೋಷ್, ಲತಾ ದೇವರಾಜ್, ಅರುಣಾ ಸುರೇಶ್, ಪ್ರೇಮ ಅನಂದ್, ಉಷಾರಾಣಿ ಮಣಿ, ರಾಧಮುನಿಯಪ್ಪ,ರತ್ನಮ್ಮ ಈರಪ್ಪ, ವೆಂಕಟಲಕ್ಷö್ಮಮ್ಮ ಮುನಿಕೃಷ್ಣಪ್ಪ, ಗ್ರಾಮ ಪಂಚಾಯಿತಿ ಪಿಡಿಒ ಕಾತ್ಯಾಯಿನಿ, ಹಿತ್ತಲಹಳ್ಳಿ ಲೊಕೇಶ್, ಬೋದಗೂರು ಸುರೇಶ್, ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.