ದಿನಾಂಕಃ 08-07-2021 ರಂದು ಹೆಚ್.ಕೆ ಜಂಕ್ಷನ್ ಕಡೆಯಿಂದ ಲಕ್ಕಿನಕೊಪ್ಪ ಕಡೆಗೆ ಬರುವ ರಸ್ತೆಯಲ್ಲಿ, ಪಲ್ಸರ್ ಬೈಕ್ ನಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಸಿಇಎನ್ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0055 /2021 U/s 8(c), 20 (b), (II)(B), 25 of NDPS Act ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತರೆ ಪೊಲೀಸರು.

ಪ್ರಕಣದಲ್ಲಿ ಆಗಿನ ತನಿಖಾಧಿಕಾರಿಗಳಾದ ವಿಜಯಾನಂದ್, ಎ.ಎಸ್.ಐ. ಸಿಇಎನ್ ಪೊಲೀಸ್ ಠಾಣೆ ಶಿವಮೊಗ್ಗ ರವರು ಪ್ರಕರಣದ ತನಿಖೆ ಪೂರೈಸಿ, ಆರೋಪಿತರ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.

ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸುರೇಶ್ ಕುಮಾರ್ ಎ. ಎಂ. ಸರ್ಕಾರಿ ಅಭಿಯೋಜಕರವರು, ಪ್ರಕರಣದ ವಾದ ಮಂಡಿಸಿದ್ದು, ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು,

ಆರೋಪಿತರ ವಿರುದ್ದ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧಿಶರಾದ ಮಂಜುನಾಥ್ ನಾಯಕ್ ರವರು ಆರೋಪಿತರಾದ ಜೀವನ್ ಎಂ, 21 ವರ್ಷ, ಭದ್ರಾವತಿ, ಶರವಣ 35 ವರ್ಷ, ಹೊಸಮನೆ, ಭದ್ರಾವತಿ ಮತ್ತು ಜೀವನ್ ಕೆ, 21 ವರ್ಷ, ಭದ್ರಾವತಿ ಟೌನ್ ಇವರಿಗೆ ತಲಾ 04 ವರ್ಷ ಕಠಿಣ ಕಾರಾವಾಸ ಶಿಕ್ಷೆ, ಮತ್ತು ರೂ 25,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 06 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ.