ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತ ʻಆಪರೇಷನ್ ಸಿಂಧೂರ್ʼ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಪಾಕಿಸ್ತಾನದ ಮೇಲೆ ಮಿಸೈಲ್ಗಳ ಸುರಿಮಳೆಗೈದಿದೆ. ಈ ನಡುವೆ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಪಾಕ್ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತ ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಚಂಡೀಗಢ, ಶ್ರೀನಗರ, ಅಮೃತಸರ, ಲುಧಿಯಾನ, ಭುಂಟರ್, ಕಿಶೆನ್ಗಢ, ಪಟಿಯಾಲ, ಶಿಮ್ಲಾ,ಕಾಂಗ್ರಾ-ಗಗ್ಗಲ್, ಭಟಿಂಡಾ,ಜೈಸಲ್ಮೇರ್, ಜೋಧಪುರ,ಬಿಕಾನೆರ್,ಹಲ್ವಾರಾ,ಪಠಾಣ್ಕೋಟ್,ಜಮ್ಮು, ಲೆಹ್, ಮುಂದ್ರಾ, ಜಾಮ್ನಗರ್,ಹಿರಾಸರ್ (ರಾಜ್ಕೋಟ್),ಪೋರಬಂದರ್,ಕೆಶೋಡ್,ಕಾಂಡ್ಲಾ,ಭುಜ್ ವಿಮಾನ ನಿಲ್ದಾಣಗಳನ್ನು ಸ್ಥಗಿತಗೊಳಿಸಲಾಗಿದೆ
ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಪ್ಲ್ಯಾನ್ ಮಾಡಿಕೊಳ್ಳುವಂತೆ ತಿಳಿಸಿವೆ. ಇನ್ನೂ ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನೂ ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭದ್ರತೆ ಹೆಚ್ಚಿಸಿರುವ ಕಾರಣ ಕೆಲವು ವಿಮಾನಗಳ ಹಾರಾಟಗಳು ರದ್ದಾಗಿವೆ. ಪ್ರಯಾಣಿಕರು ತಮ್ಮ ವಿಮಾನಯಾನದ ಬಗ್ಗೆ ಮಾಹಿತಿ ತಿಳಿದುಕೊಂಡು ಏರ್ಪೋರ್ಟ್ಗೆ ಬರಲು ಸೂಚಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಭಾರತದಿಂದ ಮತ್ತೆ ದಾಳಿ; ಲಾಹೋರ್ನ ರಕ್ಷಣಾ ವ್ಯವಸ್ಥೆ ಧ್ವಂಸ
ಗುರುವಾರ ಲಾಹೋರ್ನ ಅತ್ಯಂತ ಸೂಕ್ಷ್ಮ ಜಿಲ್ಲೆ ಎಂದು ಗುರುತಿಸಿಕೊಂಡಿರುವ ಗುಲ್ಬೆರ್ಗ್ನ ವಾಲ್ಟನ್ ವಿಮಾನ ನಿಲ್ದಾಣದ ಬಳಿಯ ರಸ್ತೆಯಲ್ಲಿ ಕೆಲ ನಿಮಿಷಗಳ ಅಂತರದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ ನಂತರ ಕರಾಚಿ, ಲಾಹೋರ್ ಮತ್ತು ಸಿಯಾಲ್ಕೋಟ್ ವಿಮಾನ ನಿಲ್ದಾಣಗಳಲ್ಲಿ ವಿಮಾನ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಮಾನತುಗೊಳಿಸಿರುವುದಾಗಿ ಪಾಕಿಸ್ತಾನದ ನಾಗರಿಕ ವಿಮಾನಯಾನ ಪ್ರಾಧಿಕಾರ ಘೋಷಿಸಿದೆ. ಅಧಿಕಾರಿಗಳು ಪ್ರದೇಶವನ್ನು ಸೀಲ್ ಮಾಡಿದ್ದು ಸಂಬಂಧವಿಲ್ಲದ ಜನರು ಪ್ರದೇಶಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.