ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಇವತ್ತು ಬೆಳಗ್ಗೆ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ವ್ಯಕ್ತಿಯ ಕತ್ತು ಸೀಳಿ ಕೊಲೆಮಾಡಲಾಗಿದ್ದು, ಇಲ್ಲಿನ ನಿವಾಸಿ 62 ವರ್ಷದ ಹೇಮಣ್ಣ ಕೊಲೆಯಾದವರು.

ಇಂದು ಬೆಳಗ್ಗೆ ಹೇಮಣ್ಣ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ಅವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ, ಹತ್ಯೆ ಮಾಡಿದ್ದಾರೆ. ಕೊಲೆಗೆ ಕಾರಣ ಹಳೆ ದ್ವೇಷ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಅಡಿಕೆ ಚೇಣಿ, ಭತ್ತ ಹಾಗೂ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಹೇಮಣ್ಣರವರ ಮೇಲೆ ಎರಡು ವರ್ಷದ ಹಿಂದೆಯು ಇದೇ ರೀತಿ ಅಟ್ಯಾಕ್ ಆಗಿತ್ತು ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸ್ತಿದ್ದಾರೆ. ಪ್ರಕರಣ ಸಂಬಂಧ ಹೊಳೆಹೊನ್ನೂರು ಠಾಣೆಯ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.