ಬಿಜೆಪಿಯ ನಿಂದನಾ ಪುಸ್ತಕವಾದ ಬಜೆಟ್; ಎಚ್‌ ಡಿ ಕುಮಾರಸ್ವಾಮಿ ಟೀಕೆ

Date:

Advertisements
  • 85,000 ಕೋಟಿ ಸಾಲ ಎತ್ತಲು ಬಜೆಟ್ ಗಾತ್ರ ಹಿಗ್ಗಿಸಿದ ರಾಜ್ಯ ಸರ್ಕಾರ
  • ಈ ಬಜೆಟ್‌ ಯೋಜನೆಗಳನ್ನು ಎಟಿಎಮ್ ಮಾಡಿಕೊಳುವ ಮುಂಗಡ ಪತ್ರ

ರಾಜ್ಯದ ಬಜೆಟ್ ಪುಸ್ತಕ ಅನ್ನುವುದಕ್ಕಿಂತ ಬಿಜೆಪಿಯ ನಿಂದನಾ ಪುಸ್ತಕ ಎಂದರೆ ಸರಿಯಾದೀತು. ಕೇಂದ್ರ ಸರ್ಕಾರ ಮತ್ತು ಹಿಂದಿನ ಬಿಜೆಪಿಯ ಆಡಳಿತ ಬಂದ ನಂತರ ಆರ್ಥಿಕ ಶಿಸ್ತನ್ನು ಉಲ್ಲಂಘಿಸಿದ್ದಾರೆ. ಸ್ವೇಚ್ಛಾಚಾರದಿಂದ ಆರ್ಥಿಕ ಶಿಸ್ತು ಹಾಳು ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಟೀಕಿಸಿದರು.

ಸಿಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್‌ ಕುರಿತು ಪ್ರತಿಕ್ರಿಯಿಸಿದ ಅವರು, “ತಮ್ಮ ದೂರದೃಷ್ಟಿ, ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ಕೊಟ್ಟು ಹೇಳುವ ಬದಲು ಕೇವಲ ಅನ್ಯರನ್ನು ತೆಗಳಲು ಬಜೆಟ್ ಬಳಕೆ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರ ನಮಗೆ ಅನ್ಯಾಯ ಮಾಡಿದೆ ಎಂದು ಬಹಳಷ್ಟು ಕಡೆ ಆರೋಪ ಮಾಡಿದ್ದಾರೆ” ಎಂದಿದ್ದಾರೆ.

“ಬೊಮ್ಮಾಯಿ ಅವರ ಕಾಲದಲ್ಲಿ ನೀರಾವರಿ ಇಲಾಖೆಗೆ 1 ಲಕ್ಷ ಕೋಟಿ ರೂ. ಯೋಜನೆಗಳಿಗೆ ಅನುಮತಿ ಕೊಟ್ಟಿದ್ದಾರೆ. ಅದಕ್ಕೆ ಈಗ 40 ಸಾವಿರ ಕೋಟಿ ರೂ. ಹೆಚ್ಚುವರಿ ಸೇರ್ಪಡೆ ಆಗಿದೆ. 1 ಲಕ್ಷ 75 ಸಾವಿರ ಕೋಟಿ ರೂ. ಮೊತ್ತದ ಯೋಜನೆಗಳಿಗೆ ಹಣ ಇಡದೆ ಘೋಷಿಸಿದ್ದಾರೆ. 2013 -18 ರಿಂದ 15 ಲಕ್ಷ ಮನೆ ಕಟ್ಟಿದ್ದೀವಿ ಎಂದು ಹೇಳಿದ್ದಾರೆ. ಎಲ್ಲಿ ಕಟ್ಟಿದ್ದಾರೆ, ಇನ್ನು 12 ಲಕ್ಷ ಮನೆ ಕಟ್ಟಲು 17,815 ಕೋಟಿ ರೂಪಾಯಿ ಬೇಕು ಎಂದು ಹೇಳಿದ್ದಾರೆ. ಅದನ್ನು ಎಲ್ಲಿಂದ ತರುತ್ತಾರೆ. ಈಗ ನೋಡಿದರೆ ಆರ್ಥಿಕ ಶಿಸ್ತನ್ನು ಹಾಳು ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

Advertisements

“3 ಲಕ್ಷದ 28 ಸಾವಿರ ಕೋಟಿ ಬಜೆಟ್ ನಲ್ಲಿ ಎರಡೂವರೆ ಲಕ್ಷ ಕೋಟಿ ರೆವಿನ್ಯೂ ಎಕ್ಸ್ಪೆಂಡಿಚರ್, 27 ಸಾವಿರ ಕೋಟಿ ಸಾಲ ಮರುಪಾವತಿಗೆ ಇಟ್ಟುಕೊಂಡಿದ್ದಾರೆ. ಅದಾದ ಮೇಲೆ 85 ಸಾವಿರ ಕೋಟಿ ಸಾಲ ಎತ್ತುತ್ತಾರೆ. ಆ ಸಾಲಕ್ಕೆ ತಲೆ ಕೊಡುವುದು ಯಾರು? ಇವರು ನೋಡಿದರೆ ಹಿಂದಿನ ಸರ್ಕಾರ ಆರ್ಥಿಕ ಶಿಸ್ತನ್ನು ಹಾಳು ಮಾಡಿದೆ ಎಂದು ಬಜೆಟ್ ಉದ್ದಕ್ಕೂ ಹೇಳಿದ್ದಾರೆ” ಎಂದು ದೂರಿದ್ದಾರೆ.

“ಬಜೆಟ್‌ನಲ್ಲಿ ದುಡಿಯುವ ಜನರ ಕೈಗೆ ಸ್ವಾವಲಂಭಿಯಾಗಲು, ಅವರು ಬದಕಲು ದೀರ್ಘಕಾಲೀನ ಯೋಜನೆ ಏನು? ಈ ಪ್ರಶ್ನೆ ಹಾಕಿಕೊಂಡರೆ ಉತ್ತರ ಶೂನ್ಯ. ಇವರ ಯಾವ ಗ್ಯಾರಂಟಿಗೂ ನನ್ನ ತಕರಾರಿಲ್ಲ, ಇನ್ನೂ ಎರಡು ಜ್ಯೋತಿ ಕೊಡಿ. ನಮದ್ದೇನು ತಕರಾರಿಲ್ಲ. ವರ್ಷಕ್ಕೆ 50 ರಿಂದ 60 ಸಾವಿರ ವೆಚ್ಚಾಗಲಿದೆ. ಇದೊಂದೆ ಈ ಬಜೆಟ್ ನಲ್ಲಿ ಇರೋದು. ಆದರೆ ಯಾವುದಕ್ಕೂ ಈ ಬಜೆಟ್ ನಲ್ಲಿ ಹಣ ಇಟ್ಟಿಲ್ಲ. ಇದು ಕೇವಲ ಕೇಂದ್ರ ಸರ್ಕಾರ – ಹಿಂದಿನ ಸರ್ಕಾರವನ್ನು ದೂಷಣೆ ಮಾಡುವ ಬಜೆಟ್ ಅಷ್ಟೇ. ಇದರಲ್ಲಿ ಏನೂ ಇಲ್ಲ” ಟೀಕಿಸಿದ್ದಾರೆ.

“ನೀರಾವರಿ, ಕೃಷಿಗೆ, ಜನರ ಬದುಕು ಕಟ್ಟಲು, ಜನರು ಸ್ವಾಭಿಮಾನಿಗಳಾಗಿ, ಸ್ವಾವಲಂಬಿಗಳಾಗಿ ಜೀವನ ಮಾಡಲು ಈ ಬಜೆಟ್ ಕೊಟ್ಟ ದೂರದೃಷ್ಟಿ ಏನು? ಆದಾಯ ಹೆಚ್ಚಿಸಲು ಅಬಕಾರಿ ಇಲಾಖೆ ಒಂದನ್ನೇ ನೆಚ್ಚಿಕೊಂಡಿದ್ದಾರೆ. ಅದಕ್ಕೆ ಪೂರಕವಾಗಿ ಈ ಬಜೆಟ್ ನಲ್ಲಿ ಅಬಕಾರಿ ಸುಂಕ ಹೆಚ್ಚಿಸಿದ್ದಾರೆ. ಅನ್ನಭಾಗ್ಯ ಅಕ್ಕಿಗೆ ಹಣ ಕೊಡಲು ಹೊರಟ್ಟಿದ್ದಾರಲ್ಲ ಇವರು, ಆ ದುಡ್ಡು ಇದಕ್ಕೆ ಹೋಗುತ್ತೆ. ಅನ್ನಭಾಗ್ಯಕ್ಕೆ ಕೊಡುವ ಹಣವನ್ನು ಅಬಕಾರಿ ಮೂಲಕ ಸುಲಿಗೆ ಮಾಡಿಕೊಳ್ಳಲು ಈ ಬಜೆಟ್ ಹುನ್ನಾರ ಮಾಡಿದೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಜೆಟ್‌ 23-24 | ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ ಪುನಾರಂಭಕ್ಕೆ 100 ಕೋಟಿ ರೂ. ಅನುದಾನ

ಕೇಂದ್ರದ ಜೊತೆಗೆ ತಿಕ್ಕಾಟ ರಾಜ್ಯಕ್ಕೆ ನಷ್ಟ

“ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸುಂದರ ಬಾಂಧವ್ಯ ಇರಬೇಕು. ಸಂಪನ್ಮೂಲ, ಅನುದಾನ, ಅಭಿವೃದ್ಧಿ ಇತ್ಯಾದಿ ವಿಷಯಗಳಲ್ಲಿ ತಿಕ್ಕಾಟ ಮಾಡಿಕೊಳ್ಳುವುದು ಒಳ್ಳೆಯದಲ್ಲ. ಪ್ರತಿ ಬಾರಿ ಅವರನ್ನು ದೂಷಣೆ ಮಾಡಿದರೆ ರಾಜ್ಯಕ್ಕೆ ನಷ್ಟ ತಪ್ಪಿದ್ದಲ್ಲ. ಕೇಂದ್ರವನ್ನು ಇವರು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದರಿಂದ ನಮಗೆ ಲಾಭ ಜಾಸ್ತಿ” ಎಂದು ಸಲಹೆ ನೀಡಿದ್ದಾರೆ.

“ಬಸವರಾಜ ಬೊಮ್ಮಾಯಿ 77 ಸಾವಿರ ಕೋಟಿ ಸಾಲ ಮಾಡಿದ್ರು, ಇವರು 85 ಸಾವಿರ ಕೋಟಿಗೆ ತೆಗೆದುಕೊಂಡು ಹೋಗಿದ್ದಾರೆ. ಹಿಂದಿನ ಬಜೆಟ್ ನ ಯೋಜನೆ ಎಲ್ಲ ಲೆಕ್ಕಾಚಾರ ತೆಗೆದ್ರು 59 ಕೋಟಿ ವ್ಯತ್ಯಾಸ ಆಗಿರಬಹುದು ಅಷ್ಟೇ. ಆರೋಗ್ಯ, ಶಿಕ್ಷಣ ಕ್ಷೇತ್ರ ಪ್ರಮುಖವಾದುವು, ಅದಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕಿದೆ. ಅದನ್ನು ಜನರಿಗೆ ತಲುಪಲು ನಾವು ಎಡವುತ್ತಿದ್ದೇವೆ. ಮೂಲಭೂತವಾಗಿ ಜನರಿಗೆ ಏನು ಬೇಕು ಎನ್ನುವ ಬಗ್ಗೆ ಬಜೆಟ್ ಪೂರ್ಣವಾಗಿ ಎಡವಿದೆ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X