ಕೋಲಾರ | ಅರಿವೇ ಅಂಬೇಡ್ಕರ ಪುಸ್ತಕ ಲೋಕಾರ್ಪಣೆ

Date:

Advertisements

ಅಂಬೇಡ್ಕರ್‌ ಅವರು ಕೇವಲ ಸಾಮಾಜಿಕ ಪರಿವರ್ತನೆಗಾಗಿ, ಸಮಾನತೆಗಾಗಿ ಮಾತ್ರ ಶ್ರಮಿಸದೇ ವಿವಿಧ ಕ್ಷೇತ್ರಗಳಲ್ಲಿ ಆಳವಾದ ಸಂಶೋಧನೆ ಮಾಡಿ ಪ್ರಬಂಧಗಳನ್ನು ರಚಿಸಿದ್ದಾರೆ ಎಂದು ಸರಕಾರಿ ಮಹಿಳಾ ಕಾಲೇಜು ಪ್ರಾಂಶುಪಾಲರಾದ ಡಾ.ಡಿ.ಇ.ಗಂಗಾಧರ್‌ ರಾವ್‌ ಹೇಳಿದರು.

ಕೋಲಾರ ನಗರದ ಮಹಿಳಾ ಸರಕಾರಿ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅರಿವೇ ಅಂಬೇಡ್ಕರ್‌ ಕೃತಿ ಹಾಗೂ ಇನ್ನಿತರ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅರ್ಥಶಾಸ್ತ್ರದಲ್ಲಿ ಅಂಬೇಡ್ಕರ್‌ ಬರೆದಿದ್ದ ರೂಪಾಯಿ ಸಮಸ್ಯೆ, ಅದರ ಮೂಲ ಮತ್ತು ಪರಿಹಾರ ಪ್ರಬಂಧವು ದೇಶದಲ್ಲಿ ಆರ್‌ಬಿಐ ಸ್ಥಾಪನೆಯಾಗಲು ಕಾರಣವಾಗಿತ್ತು. ಆದರೆ, ಬಹುತೇಕ ಅರ್ಥಶಾಸ್ತ್ರದ ವಿದ್ಯಾರ್ಥಿಗಳಿಗೆ ಈ ಮಾಹಿತಿಯೇ ಅರಿವಿಲ್ಲ ಎಂದು ವಿಷಾಧಿಸಿದರು.

Advertisements

ಕೆಯುಡಬ್ಲ್ಯೂಜೆ ಮಾಜಿ ಅಧ್ಯಕ್ಷ ಕೆ.ಎಸ್‌.ಗಣೇಶ್‌ ಮಾತನಾಡಿ, ಅಂಬೇಡ್ಕರ್‌ ಅವರ ಅಗಾಧವಾದ ಜ್ಞಾನ ಬಂಡಾರವನ್ನು ಅರಿತುಕೊಳ್ಳಲು ಅರಿವೇ ಅಂಬೇಡ್ಕರ್‌ ಪುಸ್ತಕವು ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ ಎಂದು ಹೇಳಿದರು.

ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯ ರಘು ಕುಮಾರ್‌ ಮಾತನಾಡಿ, ಅಂಬೇಡ್ಕರ್‌ ಅವರು ನೂರು ವರ್ಷಗಳ ಹಿಂದೆಯೇ ದೇಶದ ಅರ್ಥ ವ್ಯವಸ್ಥೆ ಕುರಿತು ಆಳವಾದ ಅಧ್ಯಯನ ನಡೆಸಿದ್ದರು ಎನ್ನುವುದಕ್ಕೆ ಅವರ ರೂಪಾಯಿ ಸಮಸ್ಯೆ ಪ್ರಬಂಧವೇ ಸಾಕ್ಷಿ. ಅವರು ದೇಶಕ್ಕೆ ಬೇಕಿರುವುದು ರೂಪಾಯಿ ಪುನಶ್ಚೇತನ ಎಂದು ಸಲಹೆ ನೀಡಿದ್ದರು ಎಂದು ಹೇಳಿದರು.

ಇದೇ ವೇಳೆ ಕಾಲೇಜು ಪೀಠೋಪಕರಣ ದಾನಿಗಳಾದ ಸುಧಾಕರ್‌ ಹಾಗೂ ವನಿತಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶೇಖ್‌ ಜಮೀರ್‌ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X