ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಅರಣ್ಯವಾಸಿಗಳ ಸಮಸ್ಯೆಗೆ ಶೀಘ್ರದಲ್ಲಿ ಪರಿಹಾರ;ಮಧು ಬಂಗಾರಪ್ಪ

Date:

Advertisements

ಬೆಂಗಳೂರುನಲ್ಲಿ ಶರಾವತಿ ಹಾಗೂ ಇನ್ನಿತರೆ ಯೋಜನೆಗಳ ಮುಳುಗಡೆ ಸಂತ್ರಸ್ತರು ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಾಗೂ ಕಂದಾಯ ಭೂ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಂದು ವಿಧಾನ ಸೌಧದಲ್ಲಿ ಮಹತ್ವದ ಸಭೆ ನಡೆದಿದೆ.

1001588186

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯಾ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್ ಹಾಗೂ ಹಿರಿಯ ವಕೀಲರಾದ ರಮೇಶ್ ಹೆಗ್ಡೆ, ಜಯಂತ್, ಶೇಖರ್ ಸೇರಿದಂತೆ ಕಂದಾಯ ಹಾಗೂ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು.

1001588152

ಸಭೆಯಲ್ಲಿ ಪ್ರಮುಖವಾಗಿ ಶಿವಮೊಗ್ಗ ಜಿಲ್ಲೆಯಲ್ಲಿನ ಸೊಪ್ಪಿನ ಬೆಟ್ಟ ಹಾಗೂ ಕಾನು ಭೂಮಿಗಳ ಅನಧೀಕೃತ ಸಾಗುವಳಿ ಸಕ್ರಮಗೊಳಿಸುವಿಕೆ, ಹಂಗಾಮಿ ಮನೆದಳ ಪತ್ರಗಳನ್ನು ಖಾಯಂಗೊಳಿಸುವುದು, ಕಂದಾಯ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿರುವ ಸೂಚಿತ ಅರಣ್ಯ (ಪಿಎಫ್) ಎಂಬ ಉಲ್ಲೇಖವನ್ನು ಕೈಬಿಡುವುದು, ಕರ್ನಾಟಕ ಅರಣ್ಯ ಕಾಯ್ದೆ 1963 ರ ಸೆಕ್ಷನ್ 4 ರ ಅಡಿಯಲ್ಲಿ ಮೀಸಲು ಅರಣ್ಯದ ಅಂತಿಮ ಅಧಿಸೂಚನೆಗೆ ಕಾಲಮಿತಿ ನಿಗದಿಪಡಿಸುವುದು ಮತ್ತು ಅನುಮೋದನೆ ನೀಡುವುದು, ಮೈಸೂರು ಸರ್ಕಾರದಿಂದ ನೀಡಲಾದ ಹಕ್ಕುಪತ್ರಗಳಿಗೆ ಇ-ಸ್ವತ್ತು ದಾಖಲೆ ಸೃಜಿಸುವುದು, ಸರ್ಕಾರದ ವಿವಿಧ ನೀರಾವರಿ ಹಾಗೂ ವಿದ್ಯುತ್ ಯೋಜನೆಗಳ ಮುಳುಗಡೆ ಸಂತ್ರಸ್ತರ ಪುನರ್ವಸತಿ ಜಮೀನುಗಳನ್ನು ಅರಣ್ಯ ಭೂಮಿ ಇಂಡೀಕರಣ ಪ್ರಸ್ತಾವನೆಯಿಂದ ಕೈಬಿಡುವುದು, 27.04.1978 ರ ಪೂರ್ವದ ಮೂರು ಎಕರೆ ಅರಣ್ಯ ಭೂಮಿಯನ್ನು ಸಕ್ರಮಗೊಳಿಸುವುದು ಮತ್ತು ಅರಣ್ಯ ಹಕ್ಕು ಮಾನ್ಯತಾ ಕಾಯ್ದೆ 2006 ರ ಅಡಿಯಲ್ಲಿ ಅರಣ್ಯ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.ಜೊತೆಗೆ, ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ವಾರಾಹಿ, ಚಕ್ರ, ಸಾವೆಹಕ್ಲು, ಭದ್ರ, ತುಂಗ ಹಾಗೂ ಇನ್ನಿತರೆ ವಿದ್ಯುತ್ ಮತ್ತು ನೀರಾವರಿ ಯೋಜನೆಗಳ ಮುಳುಗಡೆ ಸಂತ್ರಸ್ತರ ಭೂ ಹಕ್ಕಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ 0.05 ಗುಂಟೆ ಒಳಗಿನ ವಿಸ್ತೀರ್ಣದ ರೆವಿನ್ಯೂ ನಿವೇಶನವನ್ನು ಭೂ ಪರಿವರ್ತನೆ ಮಾಡುವ ಕುರಿತು ಸಭೆಯಲ್ಲಿ ಗಮನ ಸೆಳೆಯಲಾಯಿತು.

Advertisements
1001588153

ಈ ಎಲ್ಲಾ ವಿಚಾರಗಳ ಬಗ್ಗೆ ಸರ್ಕಾರವು ಅಗತ್ಯ ಕ್ರಮ ಕೈಗೊಂಡು, ಅರಣ್ಯ ಮತ್ತು ಕಂದಾಯ ಭೂ ಹಕ್ಕಿನ ಶಿವಮೊಗ್ಗ ಜಿಲ್ಲೆಯ ಮುಳುಗಡೆ ಸಂತ್ರಸ್ತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವಂತೆ ಸಚಿವರು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದರು.ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದ್ದಾರೆ.

ಈ ಮೂಲಕ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿವಮೊಗ್ಗ ಜಿಲ್ಲೆಯ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯವಾಸಿಗಳ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ದೊರೆಯುವ ಆಶಾಭಾವನೆ ಮೂಡಿದೆ ಎಂಬ ಮಾಹಿತಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X