ಶಿವಮೊಗ್ಗ | ಭದ್ರಾವತಿ ಸಿದ್ದಾಪುರ ಮಾರ್ಗವಾಗಿ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ

Date:

Advertisements

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಿವಮೊಗ್ಗ ವಿಭಾಗದ ಶಿವಮೊಗ್ಗ ಘಟಕ ಹಾಗೂ ಭದ್ರಾವತಿ ಘಟಕದಿಂದ ಶಿವಮೊಗ್ಗ – ಭದ್ರಾವತಿ ವಯಾ ಸಿದ್ದಾಪುರ, ಮಿಲ್ಟ್ರಿ ಕ್ಯಾಂಪ್, ಜಯಶ್ರೀ ಸರ್ಕಲ್ ಮಾರ್ಗವಾಗಿ ನಗರ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಈ ಸಾರಿಗೆಯ ಪ್ರಯೋಜನವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡದಕಟ್ಟೆಯ ರೈಲ್ವೆ ಮೇಲ್ಸೇತುವೆಯ ಕಾಮಗಾರಿ ಹಿನ್ನಲೆಯಲ್ಲಿ ಮೂರು ವರ್ಷಗಳಿಂದ ಸಿದ್ದಾಪುರದ ಮೇಲೆ KSRTC ನಗರ ಸಂಚಾರಿ ಬಸ್ ಗಳು ಭದ್ರಾವತಿ ನಗರವನ್ನ ಪ್ರವೇಶಿಸುತ್ತಿತ್ತು.

ಈಗ ಕಡದಕಟ್ಟೆ ರೈಲ್ವೆ ಮೇಲ್ಸೇತುವೆ ಉದ್ಘಾಟನೆಗೊಂಡ ಕಾರಣ ಎಲ್ಲಾ ಸರ್ಕಾರಿ ಸಾರಿಗೆ ಸಂಸ್ಥೆ ಬಸ್ ಗಳು ಮತ್ತು ನಗರ ಸಂಚಾರಿ ಬಸ್ ಗಳು ಈ ಮಾರ್ಗವಾಗಿ ಭದ್ರಾವತಿ ಪ್ರವೇಶಿಸುತ್ತಿದೆ.

Advertisements

ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಸಿದ್ದಾಪುರದ ಮೇಲೆ ಸಂಚರಿಸುವರಿಗೆ ತೊಂದರೆ ಆಗದಂತೆ ನಾಲ್ಕು ಬಸ್ ಗಳನ್ನ ಸಂಸ್ಥೆ ಸಂಚರಿಸಲು ಅನುವು ಮಾಡಿಕೊಟ್ಟಿದೆ. ನಾಳೆಯಿಂದ ಈ ನಾಲ್ಕು ಬಸ್ ಗಳು ಅಧಿಕೃತವಾಗಿ ಸಂಚರಿಸಲಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X