ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಾರ್ಕೆಟ್ ರಸ್ತೆಯಲ್ಲಿ ನಿಂತಿದ್ದ ಕಾರೊಂದರ ಕಿಟಕಿ ಒಡೆದು ಹಣ ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ವೈಯಕ್ತಿಕ ಕೆಲಸಕ್ಕೆ ಮಾರುಕಟ್ಟೆಗೆ ಹೋಗಿದ್ದ ಬಾಲಚಂದ್ರ ಬನವಿ ಅವರು ರಸ್ತೆ ಬದಿ ಕಾರು ನಿಲ್ಲಿಸಿ ಕೆಲಸದ ನಿಮಿತ್ತ ಹೋಗಿದ್ದಾರೆ. ಅವರು ಹಿಂತಿರುಗಿ ಬರುವಷ್ಟರಲ್ಲಿ ಕಾರಿನಲ್ಲಿದ್ದ 50 ಸಾವಿರ ರೂ ನಗದನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಇಂದು ಸುಮಾರು ಮಧ್ಯಾಹ್ನ 12:೦೦ ಗಂಟೆ ಸುಮಾರಿಗೆ ಹಣ ಕಳ್ಳತನ ವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಂಬಂಧ ಗೋಕಾಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ | ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ; ಇಬ್ಬರು ಯುವಕರ ಬಂಧನ