ಪಹಲ್ಗಾಮ್ ದಾಳಿಯು ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ ಕೃತ್ಯ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಕೋಲಾರ ಜಿಲ್ಲೆಯ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೋಲಾರದ ಕುಂಬಾರಪೇಟೆ ನಿವಾಸಿ ಮುನೀರ್ ಖಾನ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಕೇಂದ್ರದ ವಿರುದ್ಧ ಆರೋಪ ಮಾಡಿದ್ದರು. ಬಿಹಾರ ಚುನಾವಣೆಯಲ್ಲಿ ಹಿಂದು ಮತಗಳನ್ನು ಬಿಜೆಪಿಯತ್ತ ಸೆಳೆಯಲು ಪೂರ್ವನಿಯೋಜಿತವಾಗಿ ಕೇಂದ್ರ ಸರ್ಕಾರವೇ ಈ ಕೃತ್ಯವನ್ನು ನಡೆಸಿದೆ ಎಂದು ಆರೋಪಿಸಿದ್ದರು. ಅವರ ವಿರುದ್ಧ ಕೋಲಾರದ ಗಲ್ ಪೇಟೆ ಠಾಣೆಯಲ್ಲಿ ಪಕ್ರರಣ ದಾಖಲಾಗಿದೆ.
ಯೂಟ್ಯೂಬ್‌ನಲ್ಲಿ ಅವರು ಅಪ್‌ಲೋಡ್ ಮಾಡಿದ್ದ ವಿಡಿಯೋ ಸಾರ್ವಜನಿಕರಲ್ಲಿ ಗೊಂದಲವನ್ನು ಸೃಷ್ಟಿಸುತ್ತದೆ. ಸಮಾಜದಲ್ಲಿ ಅಶಾಂತಿ, ಕೋಮು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ ಪೊಲೀಸರು ಹೇಳಿದ್ದಾರೆ. ಮುನಿರ್ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದ್ದಾರೆ. ಯೂಟ್ಯೂಬ್‌ನಿಂದ ಆ ವಿಡಿಯೋವನ್ನು ಡಿಲೀಟ್ ಮಾಡಿಸಿದ್ದಾರೆ.