ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧ ಪಾಕಿಸ್ತಾನ ನಡೆಸುವ ಯುದ್ಧವೆಂದು ಪರಿಗಣಿಸಲಾಗುವುದು ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುವುದು ಎಂದು ಭಾರತ ನಿರ್ಧರಿಸಿದೆ ಎಂದು ವರದಿಯಾಗಿದೆ.
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸೇರಿ 26 ಮಂದಿ ಸಾವನ್ನಪ್ಪಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಟಿಆರ್ಎಫ್ ಹೊತ್ತುಕೊಂಡಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರವನ್ನು ನಡೆಸಿದೆ.
ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಸಿಎಂ ಸಿದ್ದರಾಮಯ್ಯ ಸೇರಿ ರಾಜಕೀಯ ನಾಯಕರಿಂದ ದಾಳಿ ಕುರಿತು ಪ್ರಶಂಸೆ
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಜೈಶ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಭಾರತ ದಾಳಿ ನಡೆಸಿದೆ. ಇದಾದ ಬಳಿಕ ಉಭಯ ದೇಶಗಳ ನಡುವೆ ಸಂಘರ್ಷ ಹೆಚ್ಚಾಗಿದೆ.
India has decided any future act of terror will be considered an act of war against country and will be responded accordingly: Govt sources
— Press Trust of India (@PTI_News) May 10, 2025
ಪಾಕಿಸ್ತಾನದ ಸೇನೆಯು ಮುನ್ನುಗ್ಗುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಇಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದೆ. “ಪಾಕಿಸ್ತಾನವು ತನ್ನ ಸೇನೆಯನ್ನು ಗಡಿ ಪ್ರದೇಶಗಳಿಗೆ ಕಳುಹಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ” ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಜೊತೆ ನಡೆದ ಪತ್ರಿಕಾಗೋಷ್ಠಿ ವೇಳೆ ಕರ್ನಲ್ ಸೋಫಿಯಾ ಖುರೇಷಿ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದ ಕ್ರಮಗಳಿಗೆ ಸೂಕ್ತ ಉತ್ತರ ನೀಡಲಾಗಿದೆ ಎಂದೂ ತಿಳಿಸಿದ್ದಾರೆ.
