ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ನಾಡೋಜ ಡಾ. ಬರಗೂರು ಪ್ರತಿಷ್ಠಾನ ನೀಡುವ ‘ನಾಡೋಜ ಬರಗೂರು’ ಪ್ರಶಸ್ತಿಯನ್ನು ಈ ಬಾರಿ, ಕೋಟಿಗಾನಹಳ್ಳಿ ರಾಮಯ್ಯ, ನ್ಯಾಯವಾದಿ ರವಿವರ್ಮ ಕುಮಾರ್ ಮತ್ತು ಚಲನಚಿತ್ರ ನಟ ಸುಂದರರಾಜ್ ಅವರಿಗೆ ನೀಡಲಾಗಿದೆ.
ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಮೂವರಿಗೂ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಸಿನಿಮಾ ನಿರ್ಮಾಪಕ ಚನ್ನೇಗೌಡ, ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ. ಪಿ.ಟಿ ಶ್ರೀನಿವಾಸ್ ಹಾಗೂ ಇತರರು ಭಾಗವಹಿಸಿದ್ದರು.