ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆ “ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಕೂಡಾ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ತಿಳಿಸಿದೆ.
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸೇರಿ 26 ಮಂದಿ ಸಾವನ್ನಪ್ಪಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಟಿಆರ್ಎಫ್ ಹೊತ್ತುಕೊಂಡಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರವನ್ನು ನಡೆಸಿದೆ.
ಇದನ್ನು ಓದಿದ್ದೀರಾ? ಭವಿಷ್ಯದ ಯಾವುದೇ ಭಯೋತ್ಪಾದಕ ಕೃತ್ಯವನ್ನು ಯುದ್ಧವೆಂದು ಪರಿಗಣಿಸಲು ಭಾರತ ನಿರ್ಧಾರ: ವರದಿ
ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧ ಪಾಕಿಸ್ತಾನ ನಡೆಸುವ ಯುದ್ಧವೆಂದು ಪರಿಗಣಿಸಲಾಗುವುದು ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುವುದು ಎಂದು ಭಾರತ ನಿರ್ಧರಿಸಿದೆ ಎಂದೂ ವರದಿಯಾಗಿದೆ.
— Donald J. Trump (@realDonaldTrump) May 10, 2025
ಈ ನಡುವೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಹೇಳಿಕೊಂಡಿದ್ದಾರೆ. “ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ಮಾತುಕತೆ ಬಳಿಕ ಉಭಯ ದೇಶಗಳು ಈ ನಿರ್ಧಾರಕ್ಕೆ ಬಂದಿದೆ. ಎರಡು ದೇಶಕ್ಕೂ ಧನ್ಯವಾದಗಳು” ಎಂದು ಹೇಳಿದ್ದಾರೆ.

“ಪಾಕಿಸ್ತಾನ ಮತ್ತು ಭಾರತ ಕದನ ವಿರಾಮಕ್ಕೆ ಒಪ್ಪಿದೆ” ಎಂದು ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಕ್ ದಾರ್ ಕೂಡಾ ಟ್ವೀಟ್ ಮಾಡಿದ್ದಾರೆ. ಭಾರತವೂ ಕೂಡಾ ಕದನ ವಿರಾಮಕ್ಕೆ ಒಪ್ಪಿಕೊಳ್ಳಲಾಗಿದೆ ಎಂದು ತಿಳಿಸಿದೆ.
VIDEO | MEA (@MEAIndia) Press Briefing: "The DGMO of Pakistan called DGMO of India at 15.35 hours earlier this afternoon. It was agreed between them that both sides would stop all firing and military action on land, air and sea with effect from 1700 hours IST," says foreign… pic.twitter.com/wkJci5Ue6f
— Press Trust of India (@PTI_News) May 10, 2025
“ಉಭಯ ದೇಶಗಳೂ ಗುಂಡಿನ ದಾಳಿ, ಸೇನಾ ದಾಳಿಯನ್ನು ವಾಯು ಮತ್ತು ಭೂ ಪ್ರದೇಶದಲ್ಲಿ ನಡೆಸದಿರಲು ಒಪ್ಪಿಕೊಂಡಿದೆ. ಮೇ 12ರಂದು ಮತ್ತೆ ಸಭೆ ನಡೆಯಲಿದೆ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.
