- ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
- ಮೆಟ್ರೊ ಕಾಮಗಾರಿ ವೇಳೆ ನಿರ್ಮಾಣ ಹಂತದ ಪಿಲ್ಲರ್ ಜತೆಗೆ ಬಿದ್ದ ಕ್ರೇನ್
ಬೆಂಗಳೂರಿನ ಸಿಲ್ಕ್ ಬೋರ್ಡ್‌ನಿಂದ ಮಡಿವಾಳಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್ ಶುಕ್ರವಾರ ರಾತ್ರಿ ನೆಲಕ್ಕುರುಳಿ ಬಿದ್ದಿದೆ.
ಮೆಟ್ರೊ ಕಾಮಗಾರಿ ವೇಳೆ ನಿರ್ಮಾಣ ಹಂತದ ಪಿಲ್ಲರ್ ಜತೆಗೆ ಕ್ರೇನ್ ಬಿದ್ದು, ಮತ್ತೊಂದು ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಡಿವಾಳ ಕಡೆಗೆ ತೆರಳುವವರು ಬಿಟಿಎಂ ಲೇಔಟ್ ಮೂಲಕ ಸಂಚರಿಸಬೇಕು. ಹಾಗೇ, ಬಿಟಿಎಂ ಲೇಔಟ್ನಿಂದ ಮಡಿವಾಳಕ್ಕೆ ಹೋಗುವವರು ಎಚ್ಎಸ್ಆರ್ 14ನೇ ಮುಖ್ಯ ರಸ್ತೆ ಮೂಲಕ ಪ್ರಯಾಣಿಸಬೇಕಾಗಿದೆ.
ಈ ಸುದ್ದಿ ಓದಿದ್ದೀರಾ? ಮುಂದಿನ ಐದು ದಿನಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ
ಕಳೆದ ಕೆಲವು ತಿಂಗಳ ಹಿಂದೆ ಮೆಟ್ರೋ ಪಿಲ್ಲರ್ ಕುಸಿದ ಪರಿಣಾಮ ತಾಯಿ-ಮಗು ಸಾವನ್ನಪ್ಪಿದ್ದರು. ಈ ಘಟನೆ ನಗರದ ಹೆಣ್ಣೂರು ಕ್ರಾಸ್ ಬಳಿ ನಡೆದಿತ್ತು.
ಹೆಚ್ಆರ್ಬಿಆರ್ ಲೇಔಟ್ ಕಡೆಗೆ ಹೋಗುವ ಮಾರ್ಗದಲ್ಲಿ ಕಾಮಗಾರಿ ಹಂತದಲ್ಲಿದ್ದ ಪಿಲ್ಲರ್ ರಾಡ್ಗಳು ರಸ್ತೆ ಮೇಲೆ ಕುಸಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿತ್ತು.