ರಾಜ್ಯ ಬಜೆಟ್ | ಶಿಕ್ಷಣ ಕ್ಷೇತ್ರದಲ್ಲಿ ಹಲವು ಮಾರ್ಪಾಡು; ಸ್ವಾಗತಾರ್ಹ ಬಜೆಟ್ ಎಂದ ಎಐಡಿಎಸ್‌ಒ

Date:

Advertisements

ರಾಜ್ಯ ಬಜೆಟ್‌ನಲ್ಲಿ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಲು ಕಟ್ಟಡ ದುರಸ್ತಿ ಸೇರಿದಂತೆ ಇತರ ಸೌಲಭ್ಯಗಳ ಅಭಿವೃದ್ಧಿಗಾಗಿ ಅನುದಾನ ಘೋಷಿಸಲಾಗಿದೆ. ತಜ್ಞರ ಸಮಿತಿ ನೇಮಕ ಮಾಡಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹಾಗೂ ಹೊಸ ಶಿಕ್ಷಣ ನೀತಿ-2020 (ಎನ್‌ಇಪಿ) ಕೈಬಿಟ್ಟು ರಾಜ್ಯಕ್ಕೆ ಪ್ರತ್ಯೇಕ ನೀತಿಯನ್ನು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಅನುದಾನವನ್ನು ಹೆಚ್ಚಿಸಲಾಗಿದೆ. ಸರ್ಕಾರದ ಈ ನಿರ್ಧಾರಗಳು ಸ್ವಾಗತಾರ್ಹವಾಗಿವೆ ಎಂದು ಎಐಡಿಎಸ್ಒ ಹೇಳಿದೆ.

ಬಜೆಟ್‌ ಕುರಿತು ಪ್ರತಿಕ್ರಿಯೆ ನೀಡಿದರುವ ಧಾರವಾಡ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಮಹಾಂತೇಶ್ ಬಿಳೂರ್, “ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಸಾರ್ವಜನಿಕ ಶಿಕ್ಷಣದ ಉಳಿವಿಗಾಗಿ ಎನ್‌ಇಪಿ ವಿರೋಧಿಸಿ ರಾಜ್ಯದಲ್ಲಿ ಬೆಳೆದ ವಿದ್ಯಾರ್ಥಿ ಹಾಗೂ ಜನ ಚಳುವಳಿಗೆ ಸಂದ ಜಯವಾಗಿದೆ. ರಾಜ್ಯದಲ್ಲಿ ರೂಪಿಸಲಾಗುವ ಹೊಸ ಶಿಕ್ಷಣ ನೀತಿಯು ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣ, ಕೋಮುವಾದೀಕರಣಕ್ಕೆ ಅವಕಾಶಕೊಡದೆ, ಪ್ರಜತಾಂತ್ರಿಕವಾಗಿಯೂ, ಧರ್ಮನಿರಪೇಕ್ಷವಾಗಿಯೂ ಇರಬೇಕು. ನೀತಿಯನ್ನು ರೂಪಿಸುವಾಗ ಸರ್ಕಾರವು ಏಕಪಕ್ಷಿಯವಾಗಿ ನಿರ್ಧಾರ ತೆಗೆದುಕೊಳ್ಳದೆ, ರಾಜ್ಯದ ಶಿಕ್ಷಣ ತಜ್ಞರು, ಪಾಲಕರು ಹಾಗೂ ವಿದ್ಯಾರ್ಥಿ ಸಂಘಟನೆಗಳನ್ನು ಒಳಗೊಂಡ ಪ್ರಜಾತಾಂತ್ರಿಕ ಪ್ರಕ್ರಿಯೆಯ ಮೂಲಕ ನಡೆಸಬೇಕು” ಎಂದಿದ್ದಾರೆ.

“ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದ್ದ ಲ್ಯಾಪ್‌ಟಾಪ್, ಸೈಕಲ್ ವಿತರಣೆಯಂತಹ ಕಲ್ಯಾಣ ಯೋಜನೆಗಳಿಗೆ ಅನುದಾನ ಘೋಷಣೆ ಆಗಿಲ್ಲ. ಹಿಂದಿನ ಸರ್ಕಾರದ ಬಜೆಟ್‌ಗಿಂತ ಈ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಶೇಕಡಾ ಒಂದರಷ್ಟು ಅನುದಾನ ಕಡಿತಗೊಳಿಸಿರುವುದರ ಬಗ್ಗೆ ಮುಂದಿನ ದಿನಗಳಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

Advertisements

“ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂಬುದು ವಿದ್ಯಾರ್ಥಿ ಸಮುದಾಯದ ಬಹುದಿನಗಳ ಅಪೇಕ್ಷಿಯಾಗಿತ್ತು. ಹಿಂದುಳಿದ ಮತ್ತು ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಿದ್ಯಾರ್ಥಿಗಳ ಸೌಲಭ್ಯಗಳಿಗೂ ಅನುದಾನದ ಕೊರತೆಯಿದೆ. ವಿದ್ಯಾರ್ಥಿಗಳ ಅವಶ್ಯಕತೆಗಳನ್ನು ಪೂರೈಸಲು ಬಜೆಟ್ಟಿನ ಹೊರತಾಗಿಯೂ ಸರ್ಕಾರವು ಅನುದಾನ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X