ಕಲಬುರಗಿ | ಕಾಂಗ್ರೆಸ್‌ ಭರವಸೆಯಂತೆ ಅಂಗನವಾಡಿ ನೌಕರರ ವೇತನ ಜಾರಿಗೆ ಆಗ್ರಹ

Date:

Advertisements

ಚುನಾವಣಾ ಸಮಯದಲ್ಲಿ ಕಾಂಗ್ರೆಸ್‌ ನೀಡಿದ್ದ ಭರವಸೆಯಂತೆ ಅಂಗನವಾಡಿ ನೌಕರರಿಗೆ 15,000 ರೂ. ಸಂಬಳ ನೀಡಬೇಕು. ಹಿಂದಿನ ಸರ್ಕಾರ ಘೋಷಿಸಿದ್ದ 1,000 ರೂ. ಹೆಚ್ಚುವರಿ ಗೌರವಧನವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

“ನಿವೃತ್ತಿ ಹೊಂದಿದ ಅಂಗನವಾಡಿ ನೌಕರರಿಗೆ ನಿವೃತ್ತಿ ಪರಿಹಾರ 2 ಲಕ್ಷ ನೀಡಬೇಕು. ನೌಕರರಿಗೆ ಉತ್ತಮ ಗುಣಮಟ್ಟದ ಹೊಸ ಮೊಬೈಲ್ ಹಾಗೂ ಇಂಟರನಟ್ ಒದಗಿಸಬೇಕು. ಚುನಾವಣೆಗಾಗಿ ಕೆಲಸ ಮಾಡಿದ ಬಿಎಲ್‌ಓ ಕಾರ್ಯಕರ್ತೆಯರಿಗೆ ಗೌರವಧನ ನೀಡಬೇಕು. ಐಸಿಡಿಎಸ್ ಕೆಲಸಗಳನ್ನು ಹೊರತು ಪಡಿಸಿ ಇತರ ಇಲಾಖೆಗಳ ಹೆಚ್ಚುವರಿ ಕೆಲಸಗಳನ್ನು ಅಂಗನವಾಡಿ ನೌಕರರಿಗೆ ನೀಡಬಾರದು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ವಿ.ಜಿ ದೇಸಾಯಿ, “ಸುಮಾರು ದಶಕಗಳಿಂದ ರಾಜ್ಯದ ಬಡಜನರ ನಡುವೆ ಅಂಗನವಾಡಿ ನೌಕರರು ಅಮೂಲ್ಯವಾದ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರ ನೌಕರರ ಜೀವನಕ್ಕೆ ಪೂರಕವಾದ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡುತ್ತಿಲ್ಲ. 1975ರಿಂದ ಕೆಲಸ ಮಾಡುತ್ತಿದ್ದರೂ ಇವರನ್ನು ಖಾಯಂ ನೌಕರರು ಎಂದು ಪರಿಗಣಿಸಿಲ್ಲ. ಅವರನ್ನು ಸ್ಕೀಮ್ ನೌಕರರನ್ನಾಗಿ ಮುಂದುವರಿಸುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈಗಲಾದರೂ ಅವರನ್ನು ಡಿ ಗ್ರೂಪ್‌ ನೌಕರರೆಂದು ಸರ್ಕಾರ ಪರಿಗಣಿಸಬೇಕು” ಎಂದು ಆಗ್ರಹಿಸಿದ್ದಾರೆ.

Advertisements

ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಸಮಿತಿ ಸದಸ್ಯೆ ನಾಗಮಣಿ, ಲಕ್ಷ್ಮೀ ಕದಲಾಪೂರ, ಶಿವಲೀಲಾ, ಭಾಗೀರತಿ, ತಾಲೂಕು ಅಧ್ಯಕ್ಷೆ ಮಾಹದೇವಿ, ಕಾರ್ಯದರ್ಶಿ ಲಕ್ಷ್ಮೀ ಕಡಚರ್ಲಾ, ನಾಜಿಯಾ, ಜಯಶ್ರೀ, ಶೇಖಮ್ಮ, ಪದ್ಮಾ, ಸರೋಜ, ಭವಾನಿ ಮೊದಲಾದವರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X