ಬಿಜೆಪಿಯಲ್ಲಿ ವಿರೋಧ ಪಕ್ಷದ ಸ್ಥಾನ ಕೂಡ ಮಾರಾಟಕ್ಕೆ ಇದೆಯೇನೋ? ಸಚಿವ ಎಂ ಬಿ ಪಾಟೀಲ್‌ ಲೇವಡಿ

Date:

Advertisements
  • ‘ಬಿಜೆಪಿ ಸರ್ಕಾರ ಇದ್ದಾಗ ಸಿಎಂ ಹುದ್ದೆಗೆ 2,500 ಕೋಟಿ ರೂ. ನಿಗದಿ ಮಾಡಿತ್ತು’
  • ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ಅವರ ಘನತೆಗೆ ತಕ್ಕುದಾಗಿಲ್ಲ: ಪಾಟೀಲ್

ಬಿಜೆಪಿ ಸರ್ಕಾರ ಇದ್ದಾಗ ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ. ನಿಗದಿಯಾಗಿತ್ತು. ಈಗ ವಿಪಕ್ಷ ನಾಯಕನ ಸ್ಥಾನಕ್ಕೂ ಬಿಜೆಪಿ ನೂರಾರು ಕೋಟಿ ಕೊಡಬೇಕಾದ ಪರಿಸ್ಥಿತಿ ಇರಬಹುದೇನೋ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಲೇವಡಿ ಮಾಡಿದರು.

ವಿಜಯಪುರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ನಮ್ಮ ಸರ್ಕಾರ ರಚನೆಯಾಗಿ ತಿಂಗಳಾದರೂ ಬಿಜೆಪಿ ಪಕ್ಷಕ್ಕೆ ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಲು ಸಾಧ್ಯವಾಗಿಲ್ಲ” ಎಂದರು.

“ನಮ್ಮ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ಅವರ ಘನತೆಗೆ ತಕ್ಕುದಾಗಿಲ್ಲ. ಕೇಂದ್ರ ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವ ಅವರು ಬಡವರ ಹಸಿವು ನೀಗುವ ಯೋಜನೆ ಬಗ್ಗೆ ಹೀಗೆಲ್ಲ ಹಗುರವಾಗಿ ಮಾತನಾಡಬಾರದು. ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಇವೆಲ್ಲವೂ ಇರುವುದು ಬಡವರ ಒಳಿತಿಗಾಗಿಯೇ ವಿನಾ ಶ್ರೀಮಂತರಿಗಲ್ಲ” ಎಂದು ತಿರುಗೇಟು ನೀಡಿದರು.

Advertisements

ವಿಜಯಪುರವನ್ನು ತಯಾರಿಕಾ ವಲಯದ ಕೈಗಾರಿಕೆಗಳ ಹಬ್‌‌ ಆಗಿ ಅಭಿವೃದ್ಧಿಪಡಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್‌ನಲ್ಲೇ ಈ ಬಗ್ಗೆ ಹೇಳಿದ್ದಾರೆ. ಜತೆಗೆ ಇಲ್ಲಿ ವೈನ್‌ ಪಾರ್ಕ್ ಮತ್ತು ಫುಡ್‌ ಪಾರ್ಕ್ ಎರಡೂ ಮಂಜೂರಾಗಿದೆ. ಆದರೆ ಇವುಗಳಲ್ಲಿ ಶೀತಲಗೃಹ ಸೇರಿದಂತೆ ಒಂದೇ ರೀತಿಯ ಸೌಲಭ್ಯಗಳಿರುತ್ತವೆ. ಇವುಗಳನ್ನು ಸಮನ್ವಯಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ” ಎಂದು ತಿಳಿಸಿದರು,

70 ಕೋಟಿ ರೂ. ಅನುದಾನ

“ವಿಜಯಪುರ ವಿಮಾನ ನಿಲ್ದಾಣದ ಬಾಕಿ ಉಳಿದಿರುವ ಕಾಮಗಾರಿಗಳಿಗೆ ಅಗತ್ಯವಿರುವ 70 ಕೋಟಿ ರೂ. ಹಣವನ್ನು ಸದ್ಯದಲ್ಲೇ ಒದಗಿಸಲಾಗುವುದು. ಜತೆಗೆ ಬಜೆಟ್‌ನಲ್ಲಿ ಘೋಷಿಸಿರುವಂತೆ ಈ ವರ್ಷವೇ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ. ವಿಮಾನ ನಿಲ್ದಾಣ ಕಾಮಗಾರಿಗೆ ನಿಯಮಗಳ ಪ್ರಕಾರ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಟೆಂಡರ್ ಕರೆಯಬೇಕಿತ್ತು. ಆದರೆ, ಹಿಂದಿನ ಬಿಜೆಪಿ ಸರಕಾರವು ಇದನ್ನು ಲೋಕೋಪಯೋಗಿ ಇಲಾಖೆಗೆ ವಹಿಸಿ ಲೋಪವೆಸಗಿದೆ. ಇದನ್ನು ನಾನು ಬೆಳೆಸಲು ಹೋಗುವುದಿಲ್ಲ” ಎಂದರು.

ಹಿಂದಿನ ಸರ್ಕಾರ ಆರ್ಥಿಕ ಶಿಸ್ತನ್ನು ಉಲ್ಲಂಘಿಸಿ ನೀರಾವರಿ, ಲೋಕೋಪಯೋಗಿ ಮುಂತಾದ ಇಲಾಖೆಗಳಲ್ಲಿ ಯೋಜನೆಗಳನ್ನು ಕೈಗೆತ್ತಿಕೊಂಡು ಟೆಂಡರ್ ಕರೆದಿದ್ದೇ ಇದಕ್ಕೆ ಸಿದ್ದರಾಮಯ್ಯನವರು ವಿತ್ತೀಯ ಕೊರತೆಯ ಬಜೆಟ್‌ ಮಂಡಿಸಬೇಕಾಗಿ ಬಂದಿದೆ. ಆದರೂ ರಾಜ್ಯದ ಬೊಕ್ಕಸವನ್ನು ತುಂಬಿಸಲು ಹಲವು ಕ್ರಮಗಳನ್ನು ಪ್ರಕಟಿಸಿದ್ದಾರೆ. ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ 52 ಸಾವಿರ ಕೋಟಿ ರೂ. ಕೊಡಲಾಗಿದೆ. ಈ ಯೋಜನೆಗಳಿಗೆ ಪ್ರಸ್ತುತ ಆರ್ಥಿಕ ವರ್ಷದ ಬಾಕಿ ಅವಧಿಗೆ 36 ಸಾವಿರ ಕೋಟಿ ರೂ. ಅಗತ್ಯವಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X