ಬೀದರ್‌ | ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿ

Date:

Advertisements

ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಸಮಾಜ ಹಾಗೂ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಸಹ ಪ್ರಾಧ್ಯಾಪಕ ಅಶೋಕ ರೆಡ್ಡಿ ಹೇಳಿದರು.

ನಗರದ ಓಡವಾಡದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಹಮ್ಮಿಕೊಳ್ಳಲಾದ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರವನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ʼರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆʼ ಎಂದು ತಿಳಿಸಿದರು.

ʼವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಮಯ ಪ್ರಜ್ಞೆ, ಸಂಯಮ ಮೈಗೂಡಿಸಿಕೊಳ್ಳಬೇಕು. ಶಿಕ್ಷಣದ ಜತೆಗೆ ಸಾಮಾಜಿಕ ಕಾರ್ಯಗಳಲ್ಲೂ ಪಾಲ್ಗೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಮನೋಜಕುಮಾರ ಕಿವಿಮಾತು ಹೇಳಿದರು.

Advertisements

ಪ್ರೊ. ಶ್ರೀಕಾಂತ ಪಾಟೀಲ ರಾಷ್ಟ್ರೀಯ ಸೇವಾ ಯೋಜನೆ ಉದ್ದೇಶಗಳನ್ನು ವಿವರಿಸಿದರು. ಎನ್‍ಎಸ್‍ಎಸ್ ಘಟಕ 1 ರ ಕಾರ್ಯಕ್ರಮ ಅಧಿಕಾರಿ ಶ್ರೀನಿವಾಸ್ ರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಮಾತ್ರಭಾಷೆ ಕನ್ನಡದಲ್ಲೇ 4,321 ವಿದ್ಯಾರ್ಥಿಗಳು ಫೇಲ್!

ಎನ್‍ಎಸ್‍ಎಸ್ ಘಟಕ 2 ರ ಕಾರ್ಯಕ್ರಮ ಅಧಿಕಾರಿ ಡಾ. ವಿದ್ಯಾ ಪಾಟೀಲ ಸ್ವಾಗತಿಸಿದರು. ಅಂಜಲಿ ನಿರೂಪಿಸಿದರು. ಅಶ್ವಿನಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X