ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಬಳಿಕ ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಧಾನಿ ಮೋದಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಬೇಕು ಎಂದು ಕಾಂಗ್ರೆಸ್ ಶನಿವಾರ ಒತ್ತಾಯಿಸಿದೆ. ವಿಪಕ್ಷ ನಾಯಕರುಗಳು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನೂ ನೆನೆದಿದ್ದಾರೆ.
ಕದನ ವಿರಾಮ ಬೆನ್ನಲ್ಲೇ ಹಲವು ಹಿರಿಯ ನಾಯಕರು 1971ರ ಯುದ್ಧದ ಸಮಯದಲ್ಲಿ ಇಂದಿರಾ ಗಾಂಧಿ ಅವರ ನಾಯಕತ್ವವನ್ನು ಸ್ಮರಿಸಿದರು. ಪ್ರಸ್ತುತ ಘಟನೆಗಳ ಬಗ್ಗೆ ಚರ್ಚಿಸಲು ವಿರೋಧ ಪಕ್ಷಗಳು ಸಂಸತ್ತಿನ ವಿಶೇಷ ಅಧಿವೇಶನವನ್ನು ನಡೆಸುವಂತೆಯೂ ಕೋರಿದೆ.
ಇದನ್ನು ಓದಿದ್ದೀರಾ? ಕದನ ವಿರಾಮ | ವಿಶ್ವಾಸ ದ್ರೋಹ ಎಸಗಿದ ಪ್ರಧಾನಿ ಮೋದಿ: ಮುತಾಲಿಕ್ ಆಕ್ರೋಶ
ಈ ಬಗ್ಗೆ ಕಾಂಗ್ರೆಸ್ ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಅಮೆರಿಕ ಅಭೂತಪೂರ್ವ ಘೋಷಣೆ (ಕದನ ವಿರಾಮ) ಮಾಡಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅವಶ್ಯಕತೆಯಿದೆ” ಎಂದು ಹೇಳಿದರು.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಇತ್ತೀಚೆಗೆ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಾದ ಬಳಿಕ ಭಾರತ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಪರಸ್ಪರ ದಾಳಿಗಳು ನಡೆಯುತ್ತಿವೆ.
In view of the unprecedented announcements from Washington DC, there is now a need, more than ever before, for –
— Jairam Ramesh (@Jairam_Ramesh) May 10, 2025
1. The PM to chair an all-party meeting and take political parties into confidence
2. A special session of Parliament to discuss the events of the last eighteen…
ಶನಿವಾರ (ಮೇ 10) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಭಾರತ ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದ ನಡೆದಿದೆ. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಆದರೆ ಶನಿವಾರ ರಾತ್ರಿಯಿಡೀ ಯಾವುದೇ ದಾಳಿ ನಡೆದಿಲ್ಲ. ಸದ್ಯ ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆ ನಡುವೆ ವಿಪಕ್ಷ ಸರ್ವಪಕ್ಷ ಸಭೆಗೆ ಆಗ್ರಹಿಸಿದೆ.
“ಕ್ರೂರ ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಪ್ರಾರಂಭವಾಗಿ ಕಳೆದ 18 ದಿನಗಳ ಘಟನೆಗಳು ಮತ್ತು ಮುಂದಿನ ದಾರಿಯನ್ನು ಚರ್ಚಿಸಲು, ಸಾಮೂಹಿಕ ಸಂಕಲ್ಪವನ್ನು ಪ್ರದರ್ಶಿಸಲು ಸಂಸತ್ತಿನ ವಿಶೇಷ ಅಧಿವೇಶನದ ಅವಶ್ಯಕತೆ ಈಗ ಹಿಂದೆಂದಿಗಿಂತಲೂ ಹೆಚ್ಚಾಗಿದೆ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅಭಿಪ್ರಾಯಿಸಿದ್ದಾರೆ.
प्रधानमंत्री जी से आग्रह है कि संसद का विशेष सत्र बुलाकर पहलगाम की आतंकी घटना से लेकर सीजफायर तक तिथिवार और बिंदुवार जानकारी देते हुए देश को भरोसे में लें ताकि समस्त भारतवासी संसद के माध्यम से एक स्वर एक ध्वनि में भारतीय सेना के शौर्य, वीरता और पराक्रम को धन्यवाद देते हुए विभिन्न…
— Tejashwi Yadav (@yadavtejashwi) May 10, 2025
ಈ ನಡುವೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್, “ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿ, ನಮಗೆ ನೇರವಾದ ಎಲ್ಲಾ ದೌರ್ಜನ್ಯಗಳ ವಿರುದ್ಧ ಹೋರಾಡಲು ಸಾಕಷ್ಟು ಇಚ್ಛಾಶಕ್ತಿ ಮತ್ತು ಸಂಪನ್ಮೂಲಗಳಿವೆ, ನೇರವಾದ ಬೆನ್ನೆಲುಬು ಇದೆ. 3-4 ಸಾವಿರ ಮೈಲುಗಳಷ್ಟು ದೂರದಲ್ಲಿರುವ ಯಾವುದೇ ರಾಷ್ಟ್ರವು ಭಾರತೀಯರಿಗೆ ಆದೇಶಗಳನ್ನು ನೀಡಬಹುದಾದ ಸಮಯ ಮುಗಿದು ಹೋಗಿವೆ. ಭಾರತ ಇಂದು ಇಂದಿರಾ ಗಾಂಧಿಯನ್ನು ತುಂಬಾ ನೆನಪಿಸಿಕೊಳ್ಳುತ್ತದೆ” ಎಂದು ಹೇಳಿದ್ದಾರೆ.
ಇನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಸಂಸತ್ತಿನ ವಿಶೇಷ ಅಧಿವೇಶನದ ಕರೆಯುವಂತೆ ಆಗ್ರಹಿಸಿದ್ದಾರೆ. “ಪ್ರಧಾನಿಯವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದು ಪಹಲ್ಗಾಮ್ ದಾಳಿಯಿಂದ ಕದನ ವಿರಾಮದವರೆಗೆ ದಿನಾಂಕವಾರು ಮಾಹಿತಿಯನ್ನು ನೀಡುವಂತೆ ವಿನಂತಿಸುತ್ತೇವೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕದನ ವಿರಾಮ ಒಪ್ಪಂದ ಮಾಡಿಕೊಳ್ಳುವ ಕ್ರಮವನ್ನು ಸ್ವಾಗತಿಸಿದೆ. “ಎರಡೂ ದೇಶಗಳು ಈ ಒಪ್ಪಂದಕ್ಕೆ ತಕ್ಕುದಾಗಿ ವರ್ತಿಸುತ್ತದೆ ಎಂಬ ಭಾವನೆಯನ್ನು ಹೊಂದಿದ್ದೇವೆ. ಜೊತೆಗೆ ಭಯೋತ್ಪಾದನೆಯ ದುಷ್ಟತನದಿಂದ ಜನರು ಬಳಲದಂತೆ ನೋಡಿಕೊಳ್ಳುವುದು ಮುಂದುವರಿಯುತ್ತೆ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದೆ.
