ಉಡುಪಿ | ಭಾರತೀಯ ಸೇನೆ ಹೆಸರಿನಲ್ಲಿ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ

Date:

Advertisements

ಭಾರತೀಯ ಕಥೊಲಿಕ ಧರ್ಮಾಧ್ಯಕ್ಷರ ಮಂಡಳಿಯ ಸೂಚನೆಯ ಮೇರೆಗೆ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ಭಾನುವಾರ ಭಾರತೀಯ ಸೇನೆಗೆ ಹಾಗೂ ಯೋಧರಿಗೆ ಒಳಿತಾಗುವಂತೆ ಆಶಿಸಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಪ್ರತಿಯೊಂದು ಚರ್ಚುಗಳಲ್ಲಿ ಭಾನುವಾರದ ಬಲಿಪೂಜೆಯ ವೇಳೆ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕರಿಗೆ ಒಳಿತಾಗುವಂತೆ ಕೋರಿ ವಿಶೇಷ ಪರಮ ಪ್ರಸಾದದ ಆರಾಧನೆಯ ಮೂಲಕ ಧರ್ಮಗುರುಗಳು ಪ್ರಾರ್ಥನೆಯನ್ನು ಸಲ್ಲಿಸಿದರು.

ತಮ್ಮ ಅಧಿಕೃತ ವಾರ್ಷಿಕ ಭೇಟಿಯಲ್ಲಿರುವ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಕಾರ್ಕಳ ತಾಲೂಕಿನ ಬೆಳ್ಮಣ್ ಸಂತ ಜೋಸೆಫರ ಚರ್ಚಿನಲ್ಲಿ ವಿಶೇಷ ಪ್ರಾರ್ಥನಾ ವಿಧಿಯನ್ನು ನೆರವೇರಿಸಿ ದೇಶ ಕಾಯುವ ಸೈನಿಕರಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು. ಇದೇ ವೇಳೆ ಕ್ರೈಸ್ತ ಧರ್ಮಸಭೆಗೆ ನೂತನ ಜಗದ್ಗುರುವಾಗಿ ಆಯ್ಕೆಯಾಗಿರುವ ಪೋಪ್ 14 ನೇ ಲಿಯೋ ಅವರಿಗೆ ಶುಭಕೋರಿ ವಿಶೇಷ ಆರಾಧನೆಯನ್ನು ಸಲ್ಲಿಸಿದರು.
ಈ ವೇಳೆ ಮಾತನಾಡಿದ ಧರ್ಮಾಧ್ಯಕ್ಷರು ಇಂದು ಜಗತ್ತಿನಾದ್ಯಂತ ಕ್ರೈಸ್ತ ಸಮುದಾಯ ಯೇಸು ಒಳ್ಳೆಯ ಕುರುಬರ ಹಬ್ಬದ ಆಚರಣೆಯನ್ನು ಮಾಡುತ್ತಿದ್ದು ಇದೇ ಸಂದರ್ಭದಲ್ಲಿ ಜಗತ್ತಿಗೆ ಮುಗ್ದ ಮನಸ್ಸಿನ ಶಾಂತಿ ದೂತರಾಗಿ ಜಗದ್ಗುರು ಪೋಪ್ 14 ನೇ ಲಿಯೋ ಆಯ್ಕೆಯಾಗಿದ್ದಾರೆ. ದೇಶದ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ದ ಭೀತಿ ಆವರಿಸಿದ್ದು ನಮ್ಮ ಸೈನಿಕರು ತಮ್ಮ ಜೀವದ ಹಂಗು ತೊರೆದು ತಮ್ಮ ದೇಶದ ಪ್ರಜೆಗಳ ರಕ್ಷಣೆಗೆ ಕಟಿಬದ್ದರಾಗಿ ನಿಂತಿದ್ದಾರೆ. ಅವರಿಗಾಗಿ ನಮ್ಮ ಪ್ರಾರ್ಥನೆ ಅನುದಿನವೂ ಇರಬೇಕಾಗಿದೆ.

Advertisements

ನೂತನ ಪೋಪ್ ಅವರು ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಎಲ್ಲರೂ ಕೈಜೋಡಿಸುವಂತೆ ಕರೆನೀಡಿದ್ದು, ಸಂವಾದ ಮಾತುಕತೆಗಳ ಮೂಲಕ ಸೇತುವೆ ನಿರ್ಮಿಸಿ ಎಲ್ಲರೂ ಪರಸ್ಪರ ಸಹೋದರರಂತೆ ಬಾಳಲು ಕರೆ ನೀಡಿರುತ್ತಾರೆ. ಜಗತ್ತಿನಲ್ಲಿ ಸದಾ ಶಾಂತಿ ನೆಲೆಸಬೇಕು ಎನ್ನುವುದು ಅವರ ಬಯಕೆಯಾಗಿದ್ದು ನಮ್ಮ ದೇಶದಲ್ಲಿಯೂ ಕೂಡ ಯುದ್ದದ ಕಾರ್ಮೋಡ ತಿಳಿಗೊಂಡು ಶಾಂತಿಯು ನೆಲೆಸಲಿ. ಈ ನಿಟ್ಟಿನಲ್ಲಿ ಹಿಂಸೆಯ ಮಾರ್ಗವನ್ನು ಕೈಬಿಟ್ಟು ಶಾಂತಿ ಸ್ಥಾಪನೆಯತ್ತ ಎರಡೂ ದೇಶಗಳೂ ಮುಂದೆ ಬರಲಿ ಮತ್ತು ದೇಶದ ಸೈನಿಕರ ಕರ್ತವ್ಯಕ್ಕೆ ಸದಾ ಪ್ರತಿಯೊಬ್ಬರು ಬೆಂಬಲವಾಗಿ ನಿಲ್ಲುವುದರ ಮೂಲಕ ಅವರಲ್ಲಿ ಆತ್ಮ ಸ್ಥೈರ್ಯವನ್ನು ತುಂಬುವ ಕೆಲಸವನ್ನು ಮಾಡೋಣ ಎಂದರು.

ಈ ವೇಳೆ ಚರ್ಚಿನ ಧರ್ಮಗುರು ವಂ|ಫ್ರೆಡ್ ಮಸ್ಕರೇನ್ಹಸ್, ಸಹಾಯಕ ಧರ್ಮಗುರು ವಂ|ಅರ್ನಾಲ್ಡ್ ಮತಾಯಸ್, ಕಾರ್ಕಳ ಕ್ರೈಸ್ಟ್ ಕಿಂಗ್ ಚರ್ಚಿನ ಧರ್ಮಗುರು ವಂ|ಕ್ಲೇಮಂಟ್ ಮಸ್ಕರೇನ್ಹಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X