ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಸುಳ್ಳಕ್ಕಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ರಕ್ತದ ಮಡುವಿನಲ್ಲಿ ಕಾಡಾನೆ ಕಳೇಬರ ಪತ್ತೆಯಾಗಿದೆ. ಆನೆ ಸಾವಿಗೆ ವಿದ್ಯುತ್ ಆಘಾತ, ಗುಂಡೇಟು ಇಲ್ಲವೇ ವಾಹನ ಅಪಘಾತ ಕಾರಣವಾಗಿರಬಹುದು ಎಂದು ಸ್ಥಳೀಯರಲ್ಲಿ ಅಭಿಪ್ರಾಯವಾಗಿದೆ. ವಿದ್ಯುತ್ ತಂತಿ ತಗುಲಿ ಕಾಡಾನೆ ಮೃತ ಪಟ್ಟಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ l ಗೌರಿ ಲಂಕೇಶ್ ವೇದಿಕೆಯಲ್ಲಿ ಸರಳ ವೈಚಾರಿಕ ವಿವಾಹ: ವಧು-ವರರಲ್ಲಿ ಹೊಸ ತೇಜಸ್ಸನ್ನು ತುಂಬಿದೆ
ಹೈಟೆನ್ನನ್ ವಿದ್ಯುತ್ ತಂತಿಯನ್ನು ಕಂಬದ ಸಮೀಪವಿರುವ ಮರಕ್ಕೆ ಕಟ್ಟಿದ್ದರಿಂದ ವಿದ್ಯುತ್ ತಂತಿ ಸ್ಪರ್ಶಿಸಿ ಆನೆಗೆ ಸಾವನಪ್ಪಿರಬೇಕು ಎಂದು ಶಂಕಿಸಲಾಗಿದೆ. ಈ ಘಟನೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿಯುತ್ತದೆ ಎಂದು ತಿಳಿಸಿದರು.