ಮೇ 12ರಂದು ರಾಜ್ಯಾದ್ಯಂತ ಹಲವು ಕಡೆ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೇ 13ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ಮತ್ತು ತಮಿಳುನಾಡಿನ ಒಳನಾಡಿನಾದ್ಯಂತ ಮರಾಠವಾಡದಿಂದ ಮನ್ನಾರ್ ಕೊಲ್ಲಿಯವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿ ಉತ್ತರ-ದಕ್ಷಿಣ ವಾಯುಭಾರ ಕುಸಿತ ಮುಂದುವರೆದಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನು ಓದಿದ್ದೀರಾ? ಬೆಂಗಳೂರಿನಲ್ಲಿ ಇಂದು ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಮುಂದಿನ ಒಂದು ವಾರದವರೆಗೆ ಇದೇ ರೀತಿಯ ಹವಾಮಾನ ಇರಲಿದೆ.
12.05.2025 ರಂತೆ ರಾಜ್ಯದ ಮುಂದಿನ ಮೂರು ದಿನಗಳ #ಮಳೆ #ಮುನ್ಸೂಚನೆ ನಕ್ಷೆಗಳು. #ಬೇಸಿಗೆಮಳೆ #ವಸಂತಮಳೆ #ಪೂರ್ವಮುಂಗಾರು #KarnatakaRains #Rainfall #Forecast Maps for the next three days as of 12.05.2025 #thunderstorms #summerrains #PreMonsoon #nature #SpringRains #hailstorm@KarnatakaVarthe pic.twitter.com/ZUiqROXXKn
— Karnataka State Natural Disaster Monitoring Centre (@KarnatakaSNDMC) May 11, 2025
ನಾಳೆ(ಮೇ 12) ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರು ನಗರದಲ್ಲಿ ಸಂಜೆ ವೇಳೆಗೆ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಮಧ್ಯಮ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
