ಉಡುಪಿ | ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

Date:

Advertisements
  • ಕಾಲು ಸಂಕಗಳ ನಿರ್ಮಾಣ, ಕಿಂಡಿ ಅಣೆಕಟ್ಟು ಬಗ್ಗೆ ಮಾಹಿತಿ ಪಡೆದು ಕ್ರಮದ ಭರವಸೆ
  • ಮಳೆಯಿಂದ ಜೀವ ಹಾನಿ ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ : ಹೆಬ್ಬಾಳ್ಕರ್

ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತವನ್ನು ತಡೆಯುವ ನಿಟ್ಟಿನಲ್ಲಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಅವರು ಶನಿವಾರ(ಜು.8) ಪಡುಬಿದ್ರೆಯ ಕಾಡಿ ಪಟ್ಣದಲ್ಲಿ ಸಮುದ್ರ ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿದ ನಂತರ ಮಾತನಾಡಿದರು.

ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಕಡಲ್ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದು ಸಚಿವೆ ತಿಳಿಸಿದರು.

Advertisements

ಜಿಲ್ಲೆಯಲ್ಲಿ ಈ ಬಾರಿ ತಡವಾಗಿ ಮಳೆ ಆರಂಭಗೊಂಡಿದ್ದರು ಸಹ ಪ್ರಾಕೃತಿಕ ವಿಕೋಪದಿಂದ ಇದುವರೆಗೆ ಏಳು ಮಂದಿ ಮೃತಪಟ್ಟಿದ್ದಾರೆ. ಇವರ ಕುಟುಂಬದವರಿಗೆ ತಲಾ ಐದು ಲಕ್ಷ ರೂಪಾಯಿಯ ಪರಿಹಾರವನ್ನು ವಿತರಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ಜೀವ ಹಾನಿ ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? EXCLUSIVE | ಸೌಜನ್ಯ ಪ್ರಕರಣ : ಯಾರದ್ದೋ ಷಡ್ಯಂತ್ರಕ್ಕೆ ನಮ್ಮ ಕುಟುಂಬ ಛಿದ್ರಗೊಂಡಿದೆ – ಸಂತೋಷ್ ರಾವ್ ತಂದೆ ಸುಧಾಕರ ರಾವ್

ಮಳೆಯಿಂದ ಮಾನವ ಜೀವ ಹಾನಿ, ಮನೆ ಹಾನಿ, ಜಾನುವಾರು ಹಾನಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಜಿಲ್ಲೆಯಲ್ಲಿ ಕಾಲು ಸಂಕಗಳ ನಿರ್ಮಾಣ ಮತ್ತು ಕಿಂಡಿ ಅಣೆಕಟ್ಟು ನಿರ್ಮಾಣದ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದರು.

WhatsApp Image 2023 07 08 at 4.38.16 PM

ಇದೇ ವೇಳೆ ಪ್ರಾಕೃತಿಕ ವಿಕೋಪದಿಂದ ಮೃತಪಟ್ಟ ಕುಟುಂಬದ ಸದಸ್ಯರೋರ್ವರಿಗೆ ಪರಿಹಾರ ವಿತರಿಸಿದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಸಾಂತ್ವನ ಹೇಳಿದರು.

ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X