ಆಪರೇಷನ್ ಸಿಂಧೂರ | ಪುಲ್ವಾಮಾ ದಾಳಿಕೋರರು ಸೇರಿ 100ಕ್ಕೂ ಹೆಚ್ಚು ಭಯೋತ್ಪಾದಕರ ಹತ್ಯೆ: ಎ ಕೆ ಭಾರ್ತಿ

Date:

Advertisements

ಮೇ 7 ರಂದು ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ಪುಲ್ವಾಮಾ ದಾಳಿಕೋರರು ಸೇರಿದಂತೆ 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಏರ್ ಮಾರ್ಷಲ್ ಎ ಕೆ ಭಾರ್ತಿ ಮಾಹಿತಿ ನೀಡಿದರು.

ಭಾನುವಾರ ಸಂಜೆ ನಡೆದ ರಕ್ಷಣಾ ಪಡೆಗಳ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಖಚಿತ ಮಾಹಿತಿ ಮೇರೆಗೆ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ್ದೇವೆ. ನಮ್ಮ ಗುರಿ ಕೇವಲ ಉಗ್ರರ ಅಡುಗುತಾಣವಾಗಿತ್ತು” ಎಂದು ತಿಳಿಸಿದರು.

“ಮೇ 7ರ ರಾತ್ರಿ ನಡೆದ ಆಪರೇಷನ್ ಸಿಂಧೂರ ಪಾಕಿಸ್ತಾನಕ್ಕೆ ಸಂಪೂರ್ಣ ಅಚ್ಚರಿಯಾಗಿತ್ತು. ಈ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಇದರಲ್ಲಿ ಐಸಿ -814 ಅಪಹರಣ ಮತ್ತು ಪುಲ್ವಾಮಾ ಸ್ಫೋಟದಲ್ಲಿ ಭಾಗಿಯಾಗಿದ್ದ ಯೂಸುಫ್ ಅಜರ್, ಅಬ್ದುಲ್ ಮಲಿಕ್ ರೌಫ್ ಮತ್ತು ಮುದಾಸೀರ್ ಅಹ್ಮದ್ ಅವರಂತಹ ಪ್ರಮುಖ ಉಗ್ರರಿದ್ದರು. ಭಾರತದಲ್ಲಿ ನಡೆದ ಇತರ ಮಾರಕ ಭಯೋತ್ಪಾದಕ ಘಟನೆಗಳಲ್ಲಿ ಇವರು ಭಾಗಿಯಾಗಿದ್ದರು” ಎಂದುಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಹೇಳಿದರು.

Advertisements

“ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನ 35-40 ಸಿಬ್ಬಂದಿಯನ್ನು ಕಳೆದುಕೊಂಡಿತು. ಕೆಲವು ವಾಯುನೆಲೆಗಳು ಮತ್ತು ಡಂಪ್‌ಗಳ ಮೇಲೆ ಪದೇ ಪದೇ ದಾಳಿ ನಡೆಸಲಾಯಿತು. ಅವೆಲ್ಲವನ್ನೂ ವಿಫಲಗೊಳಿಸಲಾಯಿತು. ಮೇ 7 ಮತ್ತು 10 ರ ನಡುವೆ ನಿಯಂತ್ರಣ ರೇಖೆಯಲ್ಲಿ ಫಿರಂಗಿ ಮತ್ತು ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿಯಲ್ಲಿ ಪಾಕಿಸ್ತಾನ ಸೇನೆಯು ಸುಮಾರು 35 ರಿಂದ 40 ಸಿಬ್ಬಂದಿಯನ್ನು ಕಳೆದುಕೊಂಡಿದೆ” ಎಂದು ವರದಿಯಾಗಿದೆ ಎಂದು ತಿಳಿಸಿದರು.

ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ನೌಕಾಪಡೆ, ವಾಯುಪಡೆ ಅಧಿಕಾರಿಗಳು ಉಪಸ್ಥಿತರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X