ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ, ಕದನ ವಿರಾಮ ನಡೆದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಪಾಕಿಸ್ತಾನದ ಭಯೋತ್ಪಾದಕ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆಸಿದ ಭಯೋತ್ಪಾಕ ದಾಳಿಯಲ್ಲಿ ಒಟ್ಟು 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ನಡೆಸಿದೆ.
ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಕಾರ್ಯಾಚರಣೆ ಮಾಹಿತಿ ವಿವರಿಸಿದ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ
ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ತನ್ನ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆ ವೇಳೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಇದಾದ ಬಳಿಕ ಉಭಯ ದೇಶಗಳು ಕದನ ವಿರಾಮ ಒಪ್ಪಂದವನ್ನು ದೃಢಪಡಿಸಿದೆ.
ಇಷ್ಟೆಲ್ಲಾ ಬೆಳವಣಿಗೆಗಳು ನಡೆದ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
