ಉತ್ತರ ಪ್ರದೇಶ | ಎರಡು ದಿನದಲ್ಲೇ 17 ನವಜಾತ ಹೆಣ್ಣು ಶಿಶುಗಳಿಗೆ ‘ಸಿಂಧೂರ್’ ಎಂದು ನಾಮಕರಣ

Date:

Advertisements

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ನಡೆಸಿದ ಬಳಿಕ ದೇಶದ ಹಲವು ಭಾಗಗಳಲ್ಲಿ ನವಜಾತ ಹೆಣ್ಣು ಶಿಶುಗಳಿಗೆ ‘ಸಿಂಧೂರ್’ ಎಂದು ಹೆಸರಿಡಲಾಗುತ್ತಿದೆ. ಅದರಲ್ಲೂ ಉತ್ತರ ಪ್ರದೇಶ ಒಂದು ರಾಜ್ಯದಲ್ಲೇ ಒಟ್ಟು 17 ನವಜಾತ ಹೆಣ್ಣು ಶಿಶುಗಳಿಗೆ ‘ಸಿಂಧೂರ್’ ಎಂದು ನಾಮಕರಣ ಮಾಡಲಾಗಿದೆ. ಅದು ಕೂಡಾ ಬರೀ ಎರಡು ದಿನದ್ಲಲೇ ಈ ನಾಮಕರಣ ನಡೆದಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ವೈದ್ಯ ಆರ್‌ ಕೆ ಶಾಹಿ, “ಮೇ 10 ಮತ್ತು ಮೇ 11ರ ನಡುವೆ ಖುಷಿನಗರ ವೈದ್ಯಕೀಯ ಕಾಲೇಜಿನಲ್ಲಿ ಒಟ್ಟು 17 ನವಜಾತ ಹೆಣ್ಣು ಶಿಶುಗಳಿಗೆ ಕುಟುಂಬಸ್ಥರು ಸಿಂಧೂರ್ ಎಂದು ಹೆಸರಿಟ್ಟಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಮಹಿಳಾ ಅಧಿಕಾರಿಗಳಾದ ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್ ಯಾರು?

Advertisements

ಪಾಕಿಸ್ತಾನದ ಭಯೋತ್ಪಾದಕ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆಸಿದ ಭಯೋತ್ಪಾಕ ದಾಳಿಯಲ್ಲಿ ಒಟ್ಟು 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ತಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.

ಇದಾದ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿ ಉದ್ವಿಗ್ನವಾಗಿದೆ. ಸದ್ಯ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೆ ಭಯೋತ್ಪಾದನೆ ವಿರುದ್ಧದ ಆಪರೇಷನ್ ಸಿಂಧೂರ ಮುಂದುವರಿದಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಪಹಲ್ಗಾಮ್ ದಾಳಿಯಲ್ಲಿ ಮಹಿಳೆಯರನ್ನು ಬಿಟ್ಟು ಪುರುಷರನ್ನು ಮಾತ್ರ ಹತ್ಯೆ ಮಾಡಲಾಗಿದೆ. ಹಲವು ಮಂದಿ ತನ್ನ ಪತಿ, ಪ್ರೇಮಿಯನ್ನು ಕಳೆದುಕೊಂಡಿದ್ದಾರೆ. ಈ ದಾಳಿಗೆ ಪ್ರತಿರೋಧವಾಗಿ ಮಹಿಳೆಯರ ಸಿಂಧೂರ ಎಂಬ ಅರ್ಥದಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಲಾಗಿದೆ. ಇದೀಗ ಸಿಂಧೂರ ಅಥವಾ ಸಿಂಧೂರ್ ಎಂಬ ಹೆಸರನ್ನು ಪೋಷಕರು ತಮ್ಮ ಮಕ್ಕಳಿಗೆ ಇಡಲು ಆರಂಭಿಸಿದ್ದಾರೆ.

ಇದನ್ನು ಓದಿದ್ದೀರಾ? ‘ಆಪರೇಷನ್ ಸಿಂಧೂರ’ ಟೈಟಲ್ ನೋಂದಣಿಗೆ ಮುಗಿಬಿದ್ದ ಬಾಲಿವುಡ್ ನಿರ್ಮಾಪಕರು

ಭಾರತೀಯ ಸೇನೆಗೆ ಗೌರವಾರ್ಥವಾಗಿ ನನ್ನ ಮಗುವಿಗೆ ಸಿಂಧೂರ್ ಎಂದು ಹೆಸರಿಡುತ್ತೇನೆ ಎಂದು ಖುಷಿನಗರ ನಿವಾಸಿ ಅರ್ಚನ ಶಾಹಿ ಮಾಧ್ಯಮಕ್ಕೆ ತಿಳಿಸಿದ್ದಾರೆ. “ಪಹಲ್ಗಾಮ್ ದಾಳಿಯಲ್ಲಿ ಹಲವು ಮಹಿಳೆಯರು ತನ್ನ ಪತಿಯನ್ನು ಕಳೆದುಕೊಂಡರು. ಅದಕ್ಕೆ ಪ್ರತೀಕಾರವಾಗಿ ಭಾರತೀಯರ ಸೇನೆ ಆಪರೇಷನ್ ಸಿಂಧೂರ ನಡೆಸಿದೆ. ಈಗ ಸಿಂಧೂರ ಬರೀ ಪದವಲ್ಲ, ಅದೊಂದು ಭಾವನೆ. ಆದ್ದರಿಂದ ನಮ್ಮ ಮಗಳಿಗೆ ಅದೇ ಹೆಸರು ಇಡಲು ನಿರ್ಧರಿಸಿದೆವು” ಎಂದು ಅರ್ಚನ ಹೇಳಿದ್ದಾರೆ.

ಹೀಗೆ ಉತ್ತರ ಪ್ರದೇಶದಲ್ಲೇ ಒಟ್ಟು 17 ನವಜಾತ ಹೆಣ್ಣು ಶಿಶುಗಳಿಗೆ ‘ಸಿಂಧೂರ್’ ಎಂದು ನಾಮಕರಣ ಮಾಡುವ ನಿರ್ಧಾರವನ್ನು ಪೋಷಕರು ಘೋಷಿಸಿದ್ದಾರೆ. ಬಿಹಾರದ ಪಟನಾದಲ್ಲೂ ಇದೇ ರೀತಿಯ ಘಟನೆಗಳು ವರದಿಯಾಗಿದೆ. ತಮ್ಮ ಹೆಣ್ಣು ಶಿಶುವಿಗೆ ಪೋಷಕರು ಸಿಂಧೂರ, ಸಿಂಧೂರಿ, ಸಿಂಧು ಎಂದು ಹೆಸರಿಡುತ್ತಿದ್ದಾರೆ ಎಂದು ವರದಿಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X