ವಿಜಯಪುರ | ದಲಿತರ ಬಿಡುಗಡೆಯ ಬೆಳಕು ಬುದ್ಧ: ಬಸವರಾಜ ಕಟ್ಟಿಮನಿ

Date:

Advertisements

ದಲಿತರು ಬುದ್ಧನನ್ನು ಬಿಡುಗಡೆಯ ಬೆಳಕು ಎಂದು ನಂಬಿದ್ದಾರೆ ಎಂದು ದಲಿತ ನಾಯಕ ಪತ್ರಿಕೆಯ ಸಂಪಾದಕ ಬಸವರಾಜ ಕಟ್ಟಿಮನಿ ಹೇಳಿದರು.

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ʼಬುದ್ಧ ಪೂರ್ಣಿಮʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ದೀನದಲಿತರ ಬದುಕಿನ ಉದ್ಧಾರಕ್ಕಾಗಿ ಬುದ್ದ ತಮ್ಮ ಇಡೀ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಇಂತಹ ವ್ಯಕ್ತಿಗಳು ತಮಗೆ ಸ್ಪೂರ್ತಿದಾಯಕ ಹಾಗೂ ಇಂದಿನ ಪೀಳಿಗೆಗೆ ಇವರ ಮೌಲ್ಯಗಳು ಮತ್ತು ಆದರ್ಶಗಳನ್ನು ಹೇಳಿಕೊಡುವ ಕೆಲಸವಾಗಬೇಕಿದೆ. ಬುದ್ಧ ದೇವರ ಅವತಾರವಲ್ಲ. ತಾತ್ವಿಕವಾಗಿ ನಮ್ಮೆಲ್ಲರಿಗಿಂತ ದೊಡ್ಡವನು ಎಂದರೂ ತಪ್ಪಾಗಲಾರದು” ಎಂದು ಅಭಿಪ್ರಾಯಪಟ್ಟರು.

Advertisements

ಪ್ರಾಸ್ತಾವಿಕವಾಗಿ ಮಾತನಾಡಿದ ಮಹೇಶ ಚಲವಾದಿ, ಬುದ್ಧನ ಮೂರು ತತ್ವಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಅಗತ್ಯವಿದೆ. ಮತ್ತು ಅವುಗಳನ್ನು ನಾವು ಮೈಗೂಡಿಸಿಕೊಳ್ಳುವ ಕೆಲಸವಾಗಬೇಕಿದೆ ಎಂದರು.

ಇದನ್ನೂ ಓದಿ: ವಿಜಯಪುರ | ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ

ಈ ವೇಳೆ ತಾಳಿಕೋಟೆ ತಾಲೂಕಿನ ತಹಶೀಲ್ದಾರ್ ಡಾ. ವಿನಯ ಹೂಗಾರ, ದಲಿತ ಸಂಘರ್ಷ ಸಮಿತಿ ನಾಗವಾರ ಬಣದ ವಿಭಾಗೀಯ ಸಂಚಾಲಕ ದೇವೇಂದ್ರ ಹಾದಿಮನಿ, ದಲಿತ ವಿದ್ಯಾರ್ಥಿ ಒಕ್ಕೂಟ ಜಿಲ್ಲಾ ಸಂಚಾಲಕ ನಾಗೇಶ ಕಟ್ಟಿಮನಿ, ಅಶೋಕ ಪಡೆಕನವರ, ಸಿದ್ದಪ್ಪ ಕೊನ್ನೂರು, ಬಸವರಾಜ ತಳವಾರ, ಶಾಂತಪ್ಪ ಕೊಡಗನೂರ, ಸಂಜೀವಕುಮಾರ ಕಟ್ಟಿಮನಿ, ಮಾನವ ಬಂದುತ್ವ ವೇದಿಕೆಯ ತಾಲೂಕು ಮುಖಂಡ ಕಾಶಿನಾಥ ಕಟ್ಟಿಮನಿ, ಬಸು ಕಟ್ಟಿಮನಿ, ಬಿ ಆರ್ ಸಿ ರಾಜು ವಿಜಯಪುರ, ಅಂಬೇಡ್ಕರ್ ಸೇನೆ ತಾಲೂಕು ಅಧ್ಯಕ್ಷ ಗೋಪಾಲ ಕಟ್ಟಿಮನಿ ಹಾಗೂ ಸಿದ್ದಪ್ಪ ಬಸರಿಕಟ್ಟಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X