ಸ್ಲಿಪ್​ನಲ್ಲಿ ವಿಕೆಟ್ ಕೀಪರ್ ನಿಂತಿದ್ದಕ್ಕೆ 5 ರನ್‌ ನೀಡಿದ ಅಂಪೈರ್; ಏನಿದು ಹೊಸ ನಿಯಮ?

Date:

Advertisements

ಬಾಂಗ್ಲಾದೇಶ ಎ ಹಾಗೂ ನ್ಯೂಜಿಲೆಂಡ್ ಎ ತಂಡಗಳ ನಡುವಿನ ಪಂದ್ಯದ ವೇಳೆ ವಿಕೆಟ್ ಕೀಪರ್ ಮಾಡಿದ ತಪ್ಪು ಈಗ ಎಲ್ಲಡೆ ವೈರಲ್‌ ಆಗುತ್ತಿದೆ.

ಬಾಂಗ್ಲಾದೇಶದ ಸಿಲ್ಹೆಟ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಎ ತಂಡವು 50 ಓವರ್​ಗಳಲ್ಲಿ ಆಲೌಟ್‌ ಆಗಿ 226 ರನ್ ಕಲೆಹಾಕಿತು.

ಈ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ಎ ತಂಡವು 4 ಓವರ್‌ಗಳಲ್ಲಿ 35 ರನ್ ಪೇರಿಸಿತ್ತು. 5ನೇ ಓವರ್​ನಲ್ಲಿ ಇಬಾದತ್ ಹೊಸೈನ್ ಬೌಲಿಂಗ್‌ ದಾಳಿಗೆ ಇಳಿದಿದ್ದರು. ಈ ವೇಳೆ ಬಾಂಗ್ಲಾದೇಶ ಎ ತಂಡದ ನಾಯಕ ಹಾಗೂ ವಿಕೆಟ್ ಕೀಪರ್ ನೂರುಲ್ ಹಸನ್ ವಿಕೆಟ್ ಹಿಂದೆ ನಿಲ್ಲುವುದು ಬಿಟ್ಟು ಮೊದಲ ಸ್ಲಿಪ್‌ನಲ್ಲಿ ನಿಂತಿದ್ದರು. ಆದರೆ ಅದಕ್ಕೂ ಮುನ್ನ ಅವರು ವಿಕೆಟ್ ಹಿಂದೆ ತಮ್ಮ ಹೆಲ್ಮೆಟ್ ಇರಿಸಿದ್ದರು.

Advertisements

ಇದನ್ನು ಓದಿದ್ದೀರಾ? ಒಂದೇ ಓವರ್‌ನಲ್ಲಿ 6 ಸಿಕ್ಸ್‌; ಇಂಗ್ಲೆಂಡ್‌ನಲ್ಲಿ ಭಾರತೀಯ ಮೂಲದ ಆಟಗಾರನ ಸಾಧನೆ

ಇಬಾದತ್ ಹೊಸೈನ್ ಎಸೆದ ಚೆಂಡನ್ನು ಡೇಲ್ ಫಿಲಿಪ್ಸ್ ಬಿಟ್ಟಿದ್ದಾರೆ. ಚೆಂಡು ವಿಕೆಟ್ ಹಿಂದೆ ಕೀಪರ್ ಇಲ್ಲದಿದ್ದರಿಂದ ನೇರವಾಗಿ ಹೋಗಿ ಹೆಲ್ಮೆಟ್​ಗೆ ಬಡಿದಿದೆ. ಐಸಿಸಿ ನಿಯಮದ ಪ್ರಕಾರ, ಮೈದಾನದಲ್ಲಿರುವ ಹೆಲ್ಮೆಟ್‌ಗೆ ಚೆಂಡು ತಗುಲಿದರೆ ಬ್ಯಾಟಿಂಗ್‌ ನಡೆಸುವ ತಂಡಕ್ಕೆ 5 ದಂಡದ ರನ್‌ಗಳನ್ನು ನೀಡಬೇಕು. ಅದರಂತೆ ನ್ಯೂಜಿಲೆಂಡ್ ತಂಡಕ್ಕೆ ಹೆಚ್ಚುವರಿಯಾಗಿ 5 ರನ್​ಗಳು ಲಭಿಸಿದೆ. ಈ ವಿಡಿಯೋ ವೈರಲ್ ಆಗಿದ್ದು, ಬಾಂಗ್ಲಾದೇಶದ ಎ ತಂಡದ ನಾಯಕ ನೂರಲ್ ಹಸನ್ ಟ್ರೋಲ್ ಆಗುತ್ತಿದ್ದಾರೆ.

ಈ ಪಂದ್ಯದಲ್ಲಿ 226 ರನ್‌ಗಳ​ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ಎ ತಂಡ 48.2 ಓವರ್​ಗಳಲ್ಲಿ 231 ರನ್ ಬಾರಿಸಿ 4 ವಿಕೆಟ್​ಗಳ ಅಂತರಲ್ಲಿ ಜಯ ಸಾಧಿಸಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

Download Eedina App Android / iOS

X