ಶಿವಮೊಗ್ಗ | ಸಾಗರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಂದ ಸಂತಸ;ಮಧು ಬಂಗಾರಪ್ಪ

Date:

Advertisements

ಸೋಮವಾರ ಸಾಗರ ತಾಲ್ಲೂಕು ಆಡಳಿತ ಸೌಧ ಕಟ್ಟಡದ ಮೂರನೇ ಮಹಡಿಯಲ್ಲಿ ಶೀಟ್ ಛಾವಣಿ ಹಾಗೂ ಇತರೆ ಮೂಲಭೂತ ಸೌಕರ್ಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ , ಪಟ್ಟಣದ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಗರ ತಾಲ್ಲೂಕಿನಲ್ಲಿ ಅಕ್ರಮ- ಸಕ್ರಮ‌ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ 94 ಸಿ ಮತ್ತು 94 ಸಿಸಿ ಹಕ್ಕುಪತ್ರಗಳನ್ನು ವಿತರಿಸುತ್ತಿರುವುದು ಹಾಗೂ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.

ಇಂದು ಸಾಗರ ತಾಲ್ಲೂಕಿನ ಸುಮಾರು 8 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ.94 ಸಿ ಮತ್ತು ಸಿಸಿ 158 ಜನರಿಗೆ ಹಕ್ಕುಪತ್ರ ವಿತರಣೆ ,ಪೋಷಣ್ ಅಭಿಯಾನದಡಿ 98 ಅಂಗನವಾಡಿ ಕೇಂದ್ರಗಳಿಗೆ ಎಲ್ ಇ ಡಿ ಟಿವಿ ವಿತರಣೆಗೆ ,ಜಂಬಗಾರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ರೂಪಾಯಿ.2 ಕೋಟಿ ಮೊತ್ತದ 6 ಕೊಠಡಿಗಳಿಗೆ ಕಾಮಗಾರಿ, ಪರಿಶಿಷ್ಟ ಪಂಗಡದ ಬುಡಕಟ್ಟು ಜನಾಂಗದವರಿಗೆ 66 ಸೋಲಾರ್ ಲೈಟ್ಗಳನ್ಮು ನೀಡುತ್ತಿರುವುದು ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 7 ವಿದ್ಯಾರ್ಥಿಗಳನ್ನು ಸನ್ಮಾನಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡುವ ಕುರಿತು ಸರ್ಕಾರದ ಹಂತದಲ್ಲಿ ಮಹತ್ವದ ಸಭೆ ನಡೆಸಲಾಗಿದೆ ಎಂದರು.

Advertisements
1001600859

ಕಳೆದ ಬಾರಿಗಿಂತ ಎಸ್ ಎಸ್ ಎಲ್ ಸಿ ಯಲ್ಲಿಶೇ. 8.5 ಹೆಚ್ಚಿಗೆ ಫಲಿತಾಂಶ ಬರುವ ಮೂಲಕ ಉತ್ತಮ ಫಲಿತಾಂಶ ಬಂದಿದ್ದು, ಶಿಕ್ಷಕರು, ವಿದ್ಯಾರ್ಥಿಗಳಿಗೆ ಧನ್ಯವಾದಗಳು ಎಂದ ಅವರು ಶಾಲೆಗಳು ಉದ್ದಾರವಾದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಅದಕ್ಕಾಗಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ಶಾಸಕರಾದ ಗೋಪಾಲಕೃಷ್ಣ ಬೇಳೂರು ಮಾತನಾಡಿ, ತಾಲ್ಲೂಕು ಆಡಳಿತ ಸೌಧದ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ರೂ. 4 ಕೋಟಿ ಕಾಮಗಾರಿ, ಸೋಲಾರ್ ಲೈಟ್ ವಿತರಣೆ, ಅಂಗನವಾಡಿ ಕೇಂದ್ರಗಳಿಗೆ ಎಲ್ ಇ ಡಿ ಡಿವಿ ವಿತರಣೆ, ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸದ ವಿಷಯ. ಯುಜಿಡಿ ಕಾಮಗಾರಿಗೆ ರೂ. 20 ಕೋಟಿ ಬಿಡುಗಡೆ ಮಾಡಿದ್ದೇನೆ. , ಸರ್ಕಾರಿ ಪ್ರ.ದ.ಕಾಲೇಜು ಕೊಠಡಿ ನಿರ್ಮಾಣಕ್ಕೆ ರೂ.2 ಕೋಟಿ , ೧೫೮ ಜನರಿಗೆ ಹಕ್ಕುಪತ್ರ ವಿತರಣೆ ಮಾಡುತ್ತಿರುವುದು, ಅಂಗನವಾಡಿ ಕೇಂದ್ರಗಳಿಗೆ ಎಲ್ ಇ ಡಿ ಟಿವಿ ವಿತರಣೆ ಮಾಡುತ್ತಿರುವು ಸೇರಿದಂತೆ ತಾಲ್ಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿರುವು ಹೆಮ್ಮೆಯ ವಿಚಾರ ಎಂದರು.

1001600858

ತಾಲ್ಲೂಕಿನ 5 ವರ್ಷದ ಅಭಿವೃದ್ಧಿ ಬಗ್ಗೆ ಯೋಚಿಸಿದ್ದೇನೆ. ನಗರ ರಸ್ತೆ ಅಗಲೀಕರಣ, ಮಾರ್ಕೆಟ್ ರಸ್ತೆ ಅಗಲೀಕರ ಮಾಡುತ್ತೇವೆ. ನಗರದ ಜನರಿಗೆ 24 ಗಂಟೆ ಕುಡಿಯುವ ನೀರಿಗೆ ರೂ. 250 ಕೋಟಿ ಯೋಜನೆ ತಯಾರಾಗಿದೆ.‌ ಮನೆ ಮನೆಗೆ ನೀರು ಒದಗಿಸಲಾಗುವುದು.‌ ಮಕ್ಕಳ ಆಸ್ಪತ್ರೆಗೆ ರೂ. 1.65 ಕೋಟಿ ವೆಚ್ಚದಲ್ಲಿ ಹೈಟೆಕ್ ಗೊಳಿಸಲಾಗುವುದು ಸಾರ್ವಜನಿಕ ಆಸ್ಪತ್ರೆಗೆ ರೂ. 1.25 ಕೋಟಿ ನೀಡಲಾಗಿದೆ.‌ ತಾಲ್ಲೂಕು ಆಸ್ಪತ್ರೆ ಅಪ್ ಗ್ರೇಡ್ ಮಾಡಲು ರೂ.‌70 ಲಕ್ಷ ಸರ್ಕಾರ ನೀಡಿದೆ .ನಗರದಲ್ಲಿ ರವೀಂದ್ರನಾಥ ಟ್ಯಾಗೋರ್ ರಂಗಮಂದಿರ ನಿರ್ಮಿಸಲು ರೂ. 13 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದೆ. ನೀನಾಸಂ ಅಭಿವೃದ್ದಿಗೆ ರೂ.1 ಕೋಟಿ ನೀಡಲಾಗುತ್ತಿದೆ. ಫುಡ್ ಕೋರ್ಟ್ , ಪ್ರತಿ ವಾರ್ಡ್ ಪಾರ್ಕ್ ಮಾಡಲಾಗುವುದು ಎಂದು ತಿಳಿಸಿದರು.

1001600856

ಶರಾವತಿ ಮುಳುಗಡೆ ಪ್ರದೇಶಗಳಲ್ಲಿ ಕಾಲುಸಂಕಗಳಿಗೆ 40 ರಿಂದ 50 ಕೋಟಿ ನೀಡುವ ಭರವಸೆ ಸರ್ಕಾರ ನೀಡಿದೆ ಎಂದ ಅವರು ತಾಲ್ಲೂಕಿನಲ್ಲಿ ಯಾವುದೇ ಮೂಲಭೂತ ಸೌಕರ್ಯಕ್ಕೆ ಕೊರತೆ ಮಾಡುವುದಿಲ್ಲವೆಂದರು.‌

ಕಾರ್ಯಕ್ರಮದಲ್ಲಿ ಮುಖಂಡರಾದ ಜಯಂತ್, ತಹಶಿಲ್ದಾರ್ ಚಂದ್ರಶೇಖರ್, ಸೇರಿದಂತೆ ವಿವಿಧ ಮುಖಂಡರುಗಳ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X