ಭೀಮಾನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್ ಮುಂಭಾಗ ನಡೆದಿದೆ.
ಗುರುಸಣಗಿ ಗ್ರಾಮದ ಶಕೀಲ್ (18) ಮಹಿಬೂಬ್ (20) ಮೃತ ಯುವಕರು ಎಂದು ಗುರುತಿಸಲಾಗಿದೆ.
ಬೇಸಿಗೆ ಹಿನ್ನೆಲೆ ಸ್ನೇಹಿತರ ಜೊತೆ ಭೀಮಾನದಿಗೆ ಈಜಾಡಲು ಬಂದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳೀಯರ ಸಹಾಯದಿಂದ ಮೃತದೇಹ ಹೊರತೆಗೆಯಲಾಗಿದ್ದು, ಸ್ಥಳಕ್ಕೆ ವಡಗೇರಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಡಗೇರಾ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.