ಶಿವಮೊಗ್ಗ | ಪಾಕ್ ಪರ ಸ್ಟೇಟಸ್ ಹಾಕಿದ ವ್ಯಕ್ತಿ ಮೇಲೆ ಸುಮೊಟೊ ಕೇಸ್ ದಾಖಲು

Date:

Advertisements

ಸೋಮವಾರ ಇಂದು ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಎಸ್‌ಎನ್ ಚನ್ನಬಸಪ್ಪ ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು.ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ ಕಾರಣವಾಗುವುದು ಮಾತ್ರವಲ್ಲದೆ, ಸಾರ್ವಜನಿಕ ಭದ್ರತೆ ಮತ್ತು ಭಾವನೆಗಳ ವಿರುದ್ಧದ ಕೃತ್ಯವಾಗಿವೆ. ಇಂತಹ ದೇಶ ವಿರೋಧಿ ಚಟುವಟಿಕೆಗಳನ್ನು ಯಾವುದೇ ರೀತಿಯಿಂದಲೂ ಕ್ಷಮಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು, ಸಂಬಂಧಿತ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಆರೋಪಿಯನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಟಾಗಳ ಸಂಯೋಜಕರಾದ ದತ್ತಾತ್ರಿ, ಬಿಜೆಪಿ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ದೀನ ದಯಾಳು ಸೇರಿದಂತೆ ಬಿಜೆಪಿ ನಗರದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

1001601519

ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂಡಿದ್ದ ವ್ಯಕ್ತಿಯ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಸುಮೋಟೊ ಪ್ರಕರಣ ದಾಖಲಾಗಿದೆ.

Advertisements

ಪಾಕ್‌ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮೇ ೭ರಂದು ಭಾರತೀಯ ಸೇನಾಪಡೆಗಳು ದಾಳಿ ನಡೆಸಿದ್ದವು. ಈ ವೇಳೆ, ದಾಳಿ ಸಂಬಂಧಿಸಿದ ವಿಡಿಯೋ ತುಣಕನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಶಿವಮೊಗ್ಗದ ಇಬ್ಬು ಅಲಿಯಾಸ್ ಇಬ್ರಾಹಿಂ ಖಾನ್ ಎಂಬಾತನ ವಿರುದ್ಧ ಕೇಸ್ ದಾಖಲಾಗಿದೆ.

ಕೋಟೆ ಪೊಲೀಸ್ ಠಾಣೆಯ ಕಾನ್ಸ್‌ಟೆಬಲ್ ಪ್ರಕಾಶ್ ಎಂಬವರು ಇಬ್ಬು ಅಲಿಯಾಸ್ ಇಬ್ರಾಹಿಂ ವಿರುದ್ದ ದೂರು ನೀಡಿದ್ದಾರೆ. ಭಾರತ ದೇಶದ ಪ್ರಜೆಯಾಗಿ, ದೇಶದ ರಕ್ಷಣೆ ಪಡೆದು ಪಾಕಿಸ್ತಾನದ ಪರವಾಗಿ ದೇವರಲ್ಲಿ ಬೇಡಿಕೊಂಡಿರುವುದಾಗಿ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಕಾನ್ಸ್‌ಟೆಬಲ್ ನೀಡಿದ ಆಧಾರದ ಮೇಲೆ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X