ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲೂಕಿನ ಸಿಂದಘಟ್ಟ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ ಶಾಸಕ ಎಚ್. ಟಿ. ಮಂಜು ಕೃಷಿ ಇಲಾಖೆಯಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಸಲಕರಣೆ ವಿತರಿಸಿ ಎಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.
ರೈತರಿಗೆ ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ಪೂರೈಕೆ ಆಗುವಂತಹ ಸಲಕರಣೆಗಳ ಮಾಹಿತಿ ಹಾಗೂ ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಒದಗಿಸಲಾಗುವ ಸೇವಾ ಸೌಲಭ್ಯಗಳನ್ನು ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು. ಅರ್ಹ ಫಲಾನುಭವಿಗಳ ಬೇಡಿಕೆಗಳಿಗೆ ಅನುಗುಣವಾಗಿ ಸ್ಪಂದಿಸಿ ಸೇವೆ ಒದಗಿಸಲು ಕ್ರಮ ವಹಿಸಬೇಕು.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ತೋಟಗಾರಿಕೆ ಇಲಾಖೆಯಲ್ಲಿ ಕೈಗೆತ್ತಿಕೊಳ್ಳಬಹುದಾದ ಕಾಮಗಾರಿಗಳನ್ನು ಗ್ರಾಮ ಪಂಚಾಯತ್ ಗಳ ಮಟ್ಟದಲ್ಲಿ ಕ್ರಿಯಾ ಯೋಜನೆ ತಯಾರಿಸಿ ಅನುಷ್ಠಾನಗೊಳಿಸಲು ಕ್ರಮ ವಹಿಸಬೇಕು. ಮೀನುಗಾರಿಕೆಯ ಇಲಾಖೆ ವತಿಯಿಂದ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯದ ಯೋಜನೆ ಬಗ್ಗೆ ವಿವರಣೆ ನೀಡಬೇಕು.
ಸಿಂದಘಟ್ಟ ಶಾಲೆಯ ಎಸ್ ಎಸ್ ಎಲ್ ಸಿ ಫಲಿತಾಂಶದ ಬಗ್ಗೆ ಬೇಸರ ವ್ಯಕ್ತಪಡಿಸಿ ಜನ ಸಾಮಾನ್ಯರಿಗೆ ಜನ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕೆಂದು ಶಾಸಕ ಎಚ್ ಟಿ ಮಂಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಭಾರತ ವೈವಿಧ್ಯಮಯ ದೇಶ; ಬಹುತ್ವದಿಂದ ಕೂಡಿ ನಾವೆಲ್ಲಾ ಒಂದಾಗಿದ್ದೇವೆ : ಸಚಿವ ಡಾ. ಹೆಚ್. ಸಿ. ಮಹದೇವಪ್ಪ
ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಾವಣ್ಯ ಕುಮಾರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಸುಷ್ಮಾ, ತಾಲೂಕ್ ಪಂಚಾಯತ್ ಯೋಜನಾಧಿಕಾರಿ ಶ್ರೀನಿವಾಸ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ. ಜೆ. ವಾಣಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು, ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಇದ್ದರು.