ದೇಶದಲ್ಲಿಯೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನದ ಅವಕಾಶ

Date:

Advertisements
  • 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ
  • ಕಾಡುಕುರುಬ, ಜೇನುಕುರುಬ, ಸೋಲಿಗ ಸಮುದಾಯಕ್ಕೆ ಅವರು ಇದ್ದಲ್ಲಿಂದಲೇ ಮತದಾನ

ಕೇಂದ್ರ ಚುನಾವಣೆ ಆಯೋಗ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮನೆಯಿಂದಲೇ ಕೆಲವರಿಗೆ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ.

80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಸ್ಥಿತಿಯಲ್ಲಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶವನ್ನು ಚುನಾವಣೆ ಆಯೋಗ ಕಲ್ಪಿಸಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ದೆಹಲಿಯಲ್ಲಿ ಬುಧವಾರ ನಡೆಸಿದ ಸುದ್ದಿಗೋಷ್ಠಯಲ್ಲಿ ಈ ಮಾಹಿತಿ ಹಂಚಿಕೊಂಡರು. “ಇದೇ ಮೊದಲ ಬಾರಿಗೆ ನಾವು ಕರ್ನಾಟಕದಲ್ಲಿ 80 ವರ್ಷಕ್ಕೂ ಮೇಲ್ಪಟ್ಟ ಮತ್ತು ವಿಶೇಷ ಚೇತನರು (ಪಿಡಬ್ಲ್ಯೂಸಿ) ಮತದಾರರು ಮನೆಗಳಿಂದಲೂ ಮತದಾನ ಮಾಡುವ ಸೌಲಭ್ಯ ಪಡೆದುಕೊಂಡಿದ್ದಾರೆ. ಈ ಮೂಲಕ ಮತದಾನ ಪ್ರಮಾಣ ಹೆಚ್ಚಿಸಲು ನಿರ್ಧಾರ ಅನುಕೂಲಕರವಾಗಲಿದೆ” ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

Advertisements

ರಾಜ್ಯದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದಾರೆ. 100 ವರ್ಷ ಮೇಲ್ಪಟ್ಟವರು 16,976 ಮತದಾರರಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ 5.55 ಲಕ್ಷ ವಿಶೇಷ ಚೇತನ ಮತದಾರರಿದ್ದಾರೆ. ಇವರೆಲ್ಲರಿಗೂ ಮನೆಯಿಂದಲೇ ಮತದಾನ ಮಾಡುವ ಅವಕಾಶ ಸಿಕ್ಕಿದೆ.

ಸ್ಥಳೀಯ ಬೂತ್‌ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಈ ಮತದಾರರಿಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್‌ ಭದ್ರತೆಯಲ್ಲಿ ಅಂಚೆ ಮತಚೀಟಿ ಅಧಿಕಾರಿಗಳಿಂದ ರವಾನೆಯಾಗುತ್ತದೆ. ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮನೆಯ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬಿಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X